ಬೆಂಗಳೂರು: ನಗರ ಮತ್ತು ಹೊರವಲಯಗಳಲ್ಲಿ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರ (ಪ್ರವರ್ತನ ದಕ್ಷಿಣ) ನೇತೃತ್ವದಲ್ಲಿ 12 ತಂಡಗಳು ಕಾರ್ಯಾಚರಣೆ ನಡೆಸಿ 380ಕ್ಕೂ ಅಧಿಕ ಬಸ್ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿವೆ. 63 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಬಸ್ಗಳಲ್ಲಿ ಪ್ರಥಮ ಚಿಕಿತ್ಸೆ ಪಟ್ಟಿಗೆ, ಬೆಂಕಿ ನಂದಿಸುವ ಸಾಧನ, ತುರ್ತು ನಿರ್ಗಮನ ವ್ಯವಸ್ಥೆ ಸೇರಿದಂತೆ ಪ್ರಯಾಣಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳನ್ನು ತಂಡವು ಪರಿಶೀಲನೆ ನಡಸಿತು. ಈ ಸಂದರ್ಭದಲ್ಲಿ ತೆರಿಗೆ ಪಾವತಿಸದೇ ಇರುವ ವಾಹನಗಳು, ರಹದಾರಿ ಉಲ್ಲಂಘಿಸಿರುವ ವಾಹನಗಳು ಪತ್ತೆಯಾದವು.

ದೇವನಹಳ್ಳಿ, ಅತ್ತಿಬೆಲೆ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಜಪ್ತಿ ಮಾಡಿದ ಬಸ್ಗಳಲ್ಲಿ ಇದ್ದ ಪ್ರಯಾಣಿಕರನ್ನು ಬಿಎಂಟಿಸಿ, ಕೆಎಸ್ಆರ್ಟಿಸಿ ಮತ್ತು ಬೇರೆ ಖಾಸಗಿ ಬಸ್ಗಳಲ್ಲಿ ಕಳುಹಿಸಿಕೊಡಲಾಯಿತು. ಬಸ್ಗಳಲ್ಲಿ ಅನಧಿಕೃತವಾಗಿ ಸರಕು ಸಾಗಾಟ ಮಾಡದಂತೆ ಜಾಗೃತಿ ಮೂಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.