ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಸಾಗಣೆ: ಟ್ರಾವೆಲ್ಸ್ ಏಜೆನ್ಸಿ ಮಾಲೀಕ ಬಂಧನ

Last Updated 1 ಡಿಸೆಂಬರ್ 2020, 21:12 IST
ಅಕ್ಷರ ಗಾತ್ರ

ಬೆಂಗಳೂರು: ಕೋಲಾರದಿಂದ ನಗರಕ್ಕೆ ಗಾಂಜಾ ಸಾಗಿಸುತ್ತಿದ್ದ ಆರೋಪದಡಿ ಆರ್‌. ಪ್ರದೀಪ್‌ ಕುಮಾರ್ (36) ಎಂಬುವರನ್ನು ಎಸ್‌.ಜೆ. ಪಾರ್ಕ್‌ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಪ್ರದೀಪ್‌, ‘ಬೆಂಗಳೂರು ಟ್ರಾನ್‌ಪೋರ್ಟ್ ಸಲ್ಯೂಷನ್ಸ್ (ಬಿಟಿಎಸ್)’ ಹೆಸರಿನ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದರು. ಅವರ ಬಳಿ 25 ಕಾರುಗಳಿದ್ದವು. ಅದೇ ಕಾರುಗಳಲ್ಲಿ ಆರೋಪಿ ಡ್ರಗ್ಸ್ ಸಾಗಣೆ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಆರೋಪಿ ಕೃತ್ಯದ ಬಗ್ಗೆ ಮಾಹಿತಿ ಬಂದಿತ್ತು. ಠಾಣೆ ವ್ಯಾಪ್ತಿಯ ಎನ್‌.ಎಂ. ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ ಗಾಂಜಾ ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಅವರಿಂದ ₹ 30 ಲಕ್ಷ ಮೌಲ್ಯದ ಗಾಂಜಾ, ಕಾರು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

‘ಕೋಲಾರ ನಿವಾಸಿ ಎನ್ನಲಾದ ಸಲೀಂ ಎಂಬುವರನ್ನು ಪರಿಚಯ ಮಾಡಿಕೊಂಡಿದ್ದ ಪ್ರದೀಪ್, ಅವರ ಮೂಲಕ ಗಾಂಜಾ ಖರೀದಿ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ಅದೇ ಗಾಂಜಾವನ್ನು ತಮ್ಮ ಕಾರಿನಲ್ಲಿ ಬೆಂಗಳೂರಿಗೆ ತಂದು, ಉಪ ಪೆಡ್ಲರ್‌ಗಳ ಮೂಲಕ ಮಾರಾಟ ಮಾಡಿಸುತ್ತಿದ್ದರು.’

‘ಪರಿಚಯಸ್ಥರು ಹಾಗೂ ಸ್ನೇಹಿತರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಸಂಗತಿ ತನಿಖೆಯಿಂದ ಬಯಲಾಗಿದೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT