ಗುರುವಾರ , ಜೂಲೈ 9, 2020
23 °C

ಕಂಟೋನ್ಮೆಂಟ್, ಯಶವಂತಪುರ ನಿಲ್ದಾಣದಿಂದಲೇ ಶ್ರಮಿಕ್ ರೈಲು ಓಡಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಲಸೆ ಕಾರ್ಮಿಕರನ್ನು ಅವರ ತವರಿಗೆ ಕರೆದೊಯ್ಯುತ್ತಿದ್ದ 'ಶ್ರಮಿಕ್' ರೈಲು, ಇನ್ನು ಮುಂದೆ ನಗರದೊಳಗಿನ ಕಂಟೋನ್ಮೆಂಟ್ ಹಾಗೂ ಯಶವಂತಪುರ ರೈಲು ನಿಲ್ದಾಣದಿಂದ ಹೊರಡಲಿದೆ.

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ನಗರದ ಹೊರವಲಯದಲ್ಲಿರುವ ಚಿಕ್ಕಬಾಣವಾರ ರೈಲು ನಿಲ್ದಾಣದಿಂದ ತವರಿಗೆ ಕಳುಹಿಸಲಾಗುತ್ತಿತ್ತು. ನಿತ್ಯವೂ ಸಾವಿರಾರು ಕಾರ್ಮಿಕರು ಚಿಕ್ಕಬಾಣಾವರ ನಿಲ್ದಾಣದಿಂದ ತವರಿಗೆ ಪ್ರಯಾಣಿಸಿದ್ದಾರೆ 

ಇದೀಗ ಕಾರ್ಮಿಕರ ಸಂಖ್ಯೆ ಇಳಿಮುಖವಾಗಿದ್ದು, ಹೀಗಾಗಿ ನಗರದಿಂದಲೇ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಸರ್ಕಾರ ತೀರ್ಮಾನಿಸಿದೆ.

ಕಂಟೋನ್ಮೆಂಟ್ ಹಾಗೂ ಯಶವಂತಪುರ ರೈಲು ನಿಲ್ದಾಣದಿಂದ ಮಂಗಳವಾರ ಮಧ್ಯಾಹ್ನದಿಂದಲೇ ರೈಲುಗಳು ಹೊರಟಿವೆ. ಬಿಹಾರ, ಒಡಿಶಾ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಹಾಗೂ ಜಾರ್ಖಂಡ್ ರಾಜ್ಯದ ಸಾವಿರಕ್ಕೂ ಅಧಿಕ ಕಾರ್ಮಿಕರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು