ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್ ಅಧಿಕಾರಿಗಳ ವರ್ಗಾವಣೆ

Last Updated 6 ಮಾರ್ಚ್ 2021, 20:59 IST
ಅಕ್ಷರ ಗಾತ್ರ

ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಜಿ. ಕಲ್ಪನಾ ಅವರಿಗೆ ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿಯ ಆಡಳಿತ ವ್ಯವಸ್ಥಾಪಕರಾದ ಐಎಫ್‌ಎಸ್‌ ಅಧಿಕಾರಿ ಹರಿಕುಮಾರ್‌ ಝಾ ಅವರನ್ನು ಹೆಚ್ಚುವರಿ ಪಿಸಿಸಿಎಫ್‌ ಹಾಗೂ ಕರ್ನಾಟಕ ಮೌಲ್ಯಮಾಪನ
ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಮಹೇಶ್‌ ಬಿ. ಶಿರೂರ್‌ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿಯ ಆಡಳಿತ ವ್ಯವಸ್ಥಾಪಕರಾಗಿ ನೇಮಿಸಲಾಗಿದೆ.

ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷಾ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರಿಗೆ ಕಾರ್ಮಿಕ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT