ಬೆಂಗಳೂರು: ‘ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕಾರಣಿಗಳ ಶಿಫಾರಸು ಪರಿಗಣಿಸದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ
ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

‘ಭವಿಷ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನುಪರಿಗಣಿಸಲಾಗುವುದಿಲ್ಲ. ಈ ಸಂಬಂಧ ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು’ ಎಂದುಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.

ಕೋರಿಕೆ ಏನು?: ‘ಈ ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ
ನಿಯಮ ಬಾಹಿರವಾಗಿ ಶಿಫಾರಸು ಮಾಡಿರುವ 24 ಜನಪ್ರತಿನಿಧಿಗಳ ವಿರುದ್ಧ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆ ನಡೆಸಲು ಆದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ. ವಿಚಾರಣೆಯನ್ನು ಜನವರಿ 16ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.