ಮಂಗಳವಾರ, ಜೂನ್ 28, 2022
28 °C

ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅತ್ತಿಬೆಲೆ ಉಪವಿಭಾಗದಿಂದ ಚಂದಾಪುರ ಉಪವಿಭಾಗಕ್ಕೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಬೆಸ್ಕಾಂ ಎಂಜಿನಿಯರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಹಾಯಕ ಎಂಜಿನಿಯರ್‌ (ಎಲೆಕ್ಟ್ರಿಕಲ್) ಎಂ.ಸುರೇಶ್ ಅರ್ಜಿ ಸಲ್ಲಿಸಿ, ‘ಕೋವಿಡ್ ಕರ್ತವ್ಯದಲ್ಲಿ ಇರುವ ಕಾರಣ ವರ್ಗಾವಣೆ ಮಾಡಬಾರದು ಎಂದು ಸರ್ಕಾರ ಆದೇಶಿಸಿದೆ. ಆದರೂ, ಮುಖ್ಯಮಂತ್ರಿ ಅನುಮೋದನೆ ಇಲ್ಲದೆ ವರ್ಗಾವಣೆ ಆದೇಶ ಹೊರಡಿಸಲಾಗಿದೆ’ ಎಂದು ವಾದಿಸಿದ್ದಾರೆ.

‘ಐದು ಕಿಲೋ ಮೀಟರ್ ದೂರಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೋವಿಡ್‌ ಕರ್ತವ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು