ಸೋಮವಾರ, ಸೆಪ್ಟೆಂಬರ್ 26, 2022
22 °C

ಮಹಿಳೆ ಅಡ್ಡಗಟ್ಟಿ ಸುಲಿಗೆ: ತೃತೀಯ ಲಿಂಗಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ಮಹಿಳೆಯನ್ನು ಅಡ್ಡಗಟ್ಟಿ ಪರ್ಸ್ ಕಿತ್ತುಕೊಂಡು ಸುಲಿಗೆ ಮಾಡಿದ್ದ ಆರೋಪದಡಿ ಇಬ್ಬರು ತೃತೀಯ ಲಿಂಗಿಗಳನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಚನ್ನಸಂದ್ರದ ನಿವಾಸಿ ನಿಧನ್ಯಾ ಅಲಿಯಾಸ್ ಗುಣಶೇಖರ್ (20) ಹಾಗೂ ಪ್ರವೀಣ್ಯಾ (21) ಬಂಧಿತರು. ಘಟನೆ ನಡೆದ ಮೂರು ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ ₹ 2,600 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ದೂರುದಾರರಾದ ಸ್ವಾತಿ ಎಂಬುವರು ಬಾಡಿಗೆ ಮನೆ ಹುಡುಕಲೆಂದು ವೈಟ್‌ಫೀಲ್ಡ್‌ನ ಪ್ರಶಾಂತ್ ಲೇಔಟ್‌ನ ರಸ್ತೆಯಲ್ಲಿ ಆಗಸ್ಟ್ 30ರ ಮಧ್ಯಾಹ್ನ ಓಡಾಡುತ್ತಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಹಣ ನೀಡುವಂತೆ ಒತ್ತಾಯಿಸಿದ್ದರು.’

‘ಹಣ ನೀಡಲೆಂದು ಸ್ವಾತಿ ಅವರು ಪರ್ಸ್ ಹೊರಗೆ ತೆಗೆದಿದ್ದರು. ಅದನ್ನು ಕಸಿದುಕೊಂಡಿದ್ದ ಆರೋಪಿಗಳು, ಅದರಲ್ಲಿದ್ದ ₹3,000 ಸುಲಿಗೆ ಮಾಡಿ ಪರಾರಿಯಾಗಿದ್ದರು. ಮಹಿಳೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು