ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಬೇಡಿಕೆ ಪರಿಶೀಲನೆಗೆ ಸಮಿತಿ

Last Updated 15 ಡಿಸೆಂಬರ್ 2020, 16:39 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ನೌಕರರಿಗೆ ಆರೋಗ್ಯ ಭಾಗ್ಯ ವಿಮೆ ಸೌಲಭ್ಯ ನೀಡುವುದು, ಅಂತರ ನಿಗಮ ವರ್ಗಾವಣೆ ನೀತಿ ಮತ್ತು ಘಟಕದ ವ್ಯಾಪ್ತಿಯಲ್ಲಿ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆ ರೂಪಿಸುವ ಸಂಬಂಧ ಪರಿಶೀಲಿಸಿ, ಪ್ರಸ್ತಾವ ಸಲ್ಲಿಸಲು ಐವರು ಸದಸ್ಯರ ಸಮಿತಿಯನ್ನು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರು ಸದಸ್ಯರಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮತ್ತು ಪರಿಸರ ವಿಭಾಗದ ನಿರ್ದೇಶಕರನ್ನು ಸಮಿತಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT