ಬೆಂಗಳೂರು: ‘ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ವಿವಿಧ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆಯು ಸರ್ಕಾರಕ್ಕೆ ಆಗ್ರಹಿಸಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ತಕ್ಷಣಕ್ಕೆ ಸಾಧ್ಯವಾಗದಿದ್ದಲ್ಲಿ, ಸರ್ಕಾರಿ ನೌಕರರಿಗೆ ವೇತನ ಆಯೋಗ ನಿಗದಿಪಡಿಸಿರುವ ಸಂಬಳವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಜನವರಿ 2020ಕ್ಕೆ ಅನ್ವಯಿಸಿದಂತೆ ಶೇಕಡ 15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಣವನ್ನು ಒಂದೇ ಕಂತಿನಲ್ಲಿ ಸಾರಿಗೆ ನೌಕರರಿಗೆ ಪಾವತಿಸಬೇಕು. ನಿಗಮದ ಖಾಸಗೀಕರಣ ನಿಲ್ಲಿಸಬೇಕು. ಈ ಹಿಂದೆ ಮುಷ್ಕರಗಳಲ್ಲಿ ಭಾಗಿಯಾದ ನೌಕರರ ವಿರುದ್ಧದ ಕ್ರಮಗಳನ್ನು ರದ್ದುಗೊಳಿಸಬೇಕು. ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಉಗ್ರ ಹೋರಾಟ ಮತ್ತೆ ಪ್ರಾರಂಭಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.