ಬೆಂಗಳೂರು: ಮೆಜೆಸ್ಟಿಕ್ನಲ್ಲಿರುವ ಕೆಎಸ್ಆರ್ಟಿಸಿಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗುರುವಾರ ದಿಢೀರ್ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು.

ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಸಚಿವರ ಗಮನಕ್ಕೆ ತಂದಿದ್ದರು. ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದರು.

ಈ ಬಗ್ಗೆ ಪರಿಶೀಲಿಸಲು ಸಚಿವರು ದಿಢೀರ್ ಭೇಟಿ ನೀಡಿದರು. ಮೊದಲನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ ಹಂತದಲ್ಲಿ ಮಳೆಯಾದಾಗ ಜನರಿಗೆ ತೊಂದರೆಯಾಗುವ ಇನ್ನೆರಡು ಸ್ಥಳಗಳನ್ನು ಸರಿಪಡಿಸಲು ಸೂಚನೆ ನೀಡಿದರು.

ಬಸ್ ನಿಲ್ದಾಣದ ಎಲ್ಲ ಟರ್ಮಿನಲ್ಗಳ ಪರಿವೀಕ್ಷಣೆ ನಡೆಸಿದರು. ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ಸೂಚಿಸಿದರು.

ಕುಡಿಯುವ ನೀರು, ವಿದ್ಯುತ್ ದೀಪ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಬಳಿಕ ಬಿಎಂಟಿಸಿ ಬಸ್ ನಿಲ್ದಾಣಕ್ಕೂ ಭೇಟಿ ನೀಡಿದರು. ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗೆಸಿ, ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆಎಸ್ಆರ್ಟಿಸಿ, ಬಿಎಂಟಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.