ಬುಧವಾರ, ಆಗಸ್ಟ್ 10, 2022
21 °C

ಹಲವೆಡೆ ಬಸ್‌ ಸಂಚಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ನಗರ ಮತ್ತು ಚಿಕ್ಕಬಳ್ಳಾಪುರ ಘಟಕ ಹೊರತುಪಡಿಸಿ ಉಳಿದ ಎಲ್ಲ ವಿಭಾಗಗಳಿಂದಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಸಂಚಾರ ಭಾನುವಾರ ರಾತ್ರಿಯಿಂದ ಆರಂಭವಾಗಿದೆ.

ರಾತ್ರಿ 9 ಗಂಟೆ ವೇಳೆಗೆ 4,614 ನಿಗದಿತ ಟ್ರಿಪ್‌ಗಳ ಪೈಕಿ 339 ಬಸ್‌ಗಳು ಸಂಚಾರ ಆರಂಭಿಸಿದ್ದವು. ಮಂಗಳೂರು ವಿಭಾಗ ಹಾಗೂ ನಗರದ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹೆಚ್ಚಿನ ಸಂಖ್ಯೆಯ ಬಸ್‌ಗಳ ಸಂಚಾರ ಆರಂಭವಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳೂ ಸಂಚಾರ ಆರಂಭಿಸಿವೆ.

ನಾಲ್ಕು ದಿನಗಳ ಮುಷ್ಕರಿಂದ ನಾಲ್ಕು ಸಾರಿಗೆ ನಿಗಮಗಳಿಗೆ ಸುಮಾರು ₹ 60 ಕೋಟಿಯಷ್ಟು ನಷ್ಟವಾಗಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.