ಬೆಂಗಳೂರು: ಸರ್ಕಾರಿ ನೌಕರರಿಗೆ ನೀಡುವ ವೇತನವನ್ನು ಸಾರಿಗೆ ನೌಕರರಿಗೂ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರದಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

‘ಸಾರಿಗೆ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಿದ್ದು, ಇದರ ಅನ್ವಯ 38 ತಿಂಗಳ ಬಾಕಿಯನ್ನು ಕೂಡಲೇ ಪಾವತಿಸಬೇಕು. ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನ ಆಯೋಗದ ಮಾದರಿಯಲ್ಲೇ 2024ರ ಜನವರಿ 1ರಿಂದ ಅನ್ವಯವಾಗುವಂತೆ ಸಾರಿಗೆ ನೌಕರರಿಗೆ ವೇತನ ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

‘ಸಾರಿಗೆ ನೌಕರರ ಸಂಘ–ಸಂಸ್ಥೆಗಳ ಚುನಾವಣೆ ನಡೆಸಬೇಕು. 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ನೌಕರರನ್ನು ವಜಾ ಮಾಡಿರುವ ಶಿಕ್ಷೆಯನ್ನು ರದ್ದುಗೊಳಿಸಿ, ಅವರನ್ನು ಸೌಹಾರ್ದದಿಂದ ನಡೆಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಸರ್ಕಾರಿ ನೌಕರರಿಗೆ ನೀಡುವ ವೇತನ ಸೌಲಭ್ಯಗಳನ್ನು, ಸಾರಿಗೆ ನೌಕರರಿಗೂ ನೀಡಬೇಕು’ ಎಂದರು.

‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿದೆ. ಆದರೆ, ಸಾರಿಗೆ ನೌಕರರ ಬೇಡಿಕೆಗಳನ್ನು ಇನ್ನೂ ಈಡೇರಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಹಲವು ಸಭೆಗಳು ನಡೆದರೂ ಫಲಪ್ರದವಾಗಿಲ್ಲ’ ಎಂದು ದೂರಿದರು.

ಅಖಂಡ ಕರ್ನಾಟಕ ರಾಜ್ಯ ಸಾರಿಗೆ ಕಾರ್ಮಿಕರ ಮಹಾಮಂಡಳಿಯ ಅಧ್ಯಕ್ಷ ಎ.ವಿ. ಬೋರಶೆಟ್ಟಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯ ಘಟಕದ ಅಧ್ಯಕ್ಷ ಆರ್. ಚಂದ್ರಶೇಖರ್, ಕೆಬಿಎನ್ಎನ್ ವರ್ಕ್ರ್ಸ್ ಫೆಡರೇಷನ್ ಅಧ್ಯಕ್ಷ ಎಸ್. ನಾಗರಾಜು, ಒಕ್ಕೂಟದ ಸಲಹೆಗಾರ ರಾಧಾಕೃಷ್ಣ, ತಿಪ್ಪೇಸ್ವಾಮಿ, ಶಂಕರಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.