ಶುಕ್ರವಾರ, ಜನವರಿ 22, 2021
19 °C

ರಾಂಪುರ ಕೆರೆಯಲ್ಲಿ ಮತ್ತೆ ಕಸದ ರಾಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಹದೇವಪುರ: ಕ್ಷೇತ್ರದ ಬಿದರಹಳ್ಳಿ ಹೋಬಳಿಯ ರಾಂಪುರ ಕೆರೆ ದಂಡೆಗೆ ಇತ್ತೀಚಿನ ದಿನಗಳಲ್ಲಿ ಬಿಬಿಎಂಪಿ ಲಾರಿಗಳು ಕಸವನ್ನು ಸುರಿದು ಹೋಗುತ್ತಿವೆ. ಇದರಿಂದಾಗಿ ಕಸದ ರಾಶಿ ಕೆರೆಯ ತುಂಬಾ ತುಂಬಿಕೊಂಡಿದೆ.

‘ಕಸದ ರಾಶಿ ತುಂಬಿರುವುದರಿಂದ ನಾಯಿಗಳು ಬೀಡು ಬಿಟ್ಟಿವೆ. ‌ಕಸದ ದುರ್ವಾಸನೆಯೊಂದಿಗೆ ನಾಯಿಗಳ ಕಾಟ ಅತಿಯಾಗಿದೆ’ ಎಂದು ಸ್ಥಳೀಯ ನಿವಾಸಿ ಶಾಂತಮ್ಮ ದೂರಿದರು.

‘ಈ ಬಗ್ಗೆ ಸಂಬಂಧಪಟ್ಟವರಿಗೆ ಅನೇಕ ಸಲ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಕಸದ ರಾಶಿ ಹೆಚ್ಚುತ್ತಲೇ ಇದೆ’ ಎಂದರು. 

‘ಜಲಕಾಯವನ್ನು ಅಭಿವೃದ್ಧಿಪಡಿಸುವುದಾಗಿ ಸ್ಥಳೀಯ ಶಾಸಕರು ಕಳೆದ ವರ್ಷ ಗುದ್ದಲಿ ಪೂಜೆ ನೆರವೇರಿಸಿದ್ದರು. ಆದರೆ, ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯ ಆರಂಭಗೊಂಡಿಲ್ಲ’ ಎಂದು ಸ್ಥಳೀಯರು ದೂರಿದರು.

‘ಕಸ ಸುರಿಯುತ್ತಿರುವ ಬಗ್ಗೆ ಸ್ಥಳೀಯರು ದೂರು ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಸದ್ಯ ಬಿಬಿಎಂಪಿ ಲಾರಿಗಳು ಕೆರೆ ಬಳಿಗೆ ಬರದಂತೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ದೊಡ್ಡಗುಬ್ಬಿ ಪಂಚಾಯಿತಿ ಕಾರ್ಯದರ್ಶಿ ರಾಜೇಂದ್ರಬಾಬು ‘ಪ್ರಜಾವಾಣಿ’ಗೆ ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು