ಬೆಂಗಳೂರು: ‘ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ಚಿಕಿತ್ಸೆ ಒದಗಿಸಲು ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಟ್ರಾಮಾ ಘಟಕವನ್ನು ಸ್ಥಾಪಿಸಬೇಕು’ ಎಂದುಬೆಂಗಳೂರು ಟ್ರಾಮಾ ಕೋರ್ಸ್ ಸಮ್ಮೇಳನದ ಅಧ್ಯಕ್ಷ ಡಾ.ಎಚ್.ಎಸ್. ಚಂದ್ರಶೇಖರ್ ಅಭಿಮತ ವ್ಯಕ್ತಪಡಿಸಿದರು.

ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ನಗರದಲ್ಲಿ ಗುರುವಾರ ಆಯೋಜಿಸಿದ್ದಬೆಂಗಳೂರು ಟ್ರಾಮಾ ಕೋರ್ಸ್ ಸಮ್ಮೇಳನದಲ್ಲಿ ಮಾತನಾಡಿದರು. ‘ರಸ್ತೆ ಅಪಘಾತ ಹಾಗೂ ವಿವಿಧ ಗಾಯಗಳಿಂದ ಮೂಳೆಗೆ ಹಾನಿಮಾಡಿಕೊಂಡವರಿಗೆಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಬೇಕಾಗುತ್ತದೆ. ಸದ್ಯಜಿಲ್ಲಾ ಆಸ್ಪತ್ರೆಗಳಲ್ಲಿ ಮೂಳೆಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಚಿಕಿತ್ಸೆಗಳು ಲಭ್ಯವಿದ್ದರೂ ಪ್ರತ್ಯೇಕ ಘಟಕದ ಅಗತ್ಯವಿದೆ. ಆಗ ಬೆಂಗಳೂರಿನಂತಹ ಮಹಾನಗರಗಳಿಗೆ ರೋಗಿಗಳು ಅಲೆದಾಟ ನಡೆಸುವುದು ತಪ್ಪಲಿದೆ’ ಎಂದು ತಿಳಿಸಿದರು.

ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ, ‘ರಾಜ್ಯದಲ್ಲಿ ಈ ವರ್ಷ ಬಳ್ಳಾರಿ, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಟ್ರಾಮಾ ಘಟಕವನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.ಟ್ರಾಮಾ ಕೋರ್ಸ್‌ಗೆ ವಿಶ್ವವಿದ್ಯಾಲಯದಲ್ಲಿ ಕೂಡಾ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈ ಚಿಕಿತ್ಸೆ ರಾಜ್ಯದ ಎಲ್ಲೆಡೆ ಸಿಗುವಂತಾಗಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.