ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ: 3,208 ಜನರಿಗೆ ದಂಡ

Published 13 ಡಿಸೆಂಬರ್ 2023, 14:36 IST
Last Updated 13 ಡಿಸೆಂಬರ್ 2023, 14:36 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ನವೆಂಬರ್‌ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸುತ್ತಿದ್ದ 3,321 ಪ್ರಯಾಣಿಕರಿಂದ ₹ 6.68 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಬಿಎಂಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ನವೆಂಬರ್‌ನಲ್ಲಿ 16,421 ಬಸ್‌ ಟ್ರಿಪ್‌ಗಳಲ್ಲಿ ತನಿಖೆ ನಡೆಸಿದ್ದರು. ಸಂಸ್ಥೆಯ 1,062 ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳಾ ಪ್ರಯಾಣಿಕರಿಗೆ ಮೀಸಲಾದ ಆಸನಗಳಲ್ಲಿ ಪ್ರಯಾಣಿಸಿದ 438 ಪುರುಷ ಪ್ರಯಾಣಿಕರಿಗೆ ₹ 43,800 ದಂಡ ವಿಧಿಸಲಾಗಿದೆ.

ಪ್ರಯಾಣಿಕರು ಟಿಕೆಟ್‌ ಅಥವಾ ಬಸ್‌ ಪಾಸ್‌ ಪಡೆದು ಪ್ರಯಾಣಿಸಬೇಕು. ಮಹಿಳೆಯರಿಗೆ ಮೀಸಲಾದ ಆಸನಗಳಲ್ಲಿ ಪುರುಷರು ಕುಳಿತುಕೊಳ್ಳಬಾರದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT