ಭಾನುವಾರ, ಜೂಲೈ 5, 2020
27 °C

ಕೊರೊನಾ: ಚಿಕಿತ್ಸಾ ಅವಧಿ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ಬೇಗ ಚೇತರಿಸಿಕೊಂಡಲ್ಲಿ ಇನ್ನುಮುಂದೆ 14 ದಿನಗಳ ಬದಲು 10 ದಿನಗಳಿಗೇ ಆಸ್ಪತ್ರೆಯಿಂದ ಮನೆಗೆ ತೆರಳಲು ಅವಕಾಶ ನೀಡಲಾಗುತ್ತದೆ. 

ಈ ಬಗ್ಗೆ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು‌ ಸುತ್ತೋಲೆ ಹೊರಡಿಸಿದ್ದಾರೆ. ವ್ಯಕ್ತಿಗೆ ಮೂರು ದಿನಗಳಿಂದ ಶೀತ, ಜ್ವರ ಸೇರಿದಂತೆ ಸೋಂಕಿನ ಯಾವುದೇ ಲಕ್ಷಣಗಳು ಇರದಿದ್ದಲ್ಲಿ 10 ದಿನಗಳಿಗೆ ವ್ಯಕ್ತಿ ಮನೆಗೆ ತೆರಳಬಹುದಾಗಿದೆ. ಈ ಅವಧಿಯಲ್ಲಿ ಉಸಿರಾಟದ ಸಮಸ್ಯೆಗಳು ಸಹ ಇರಬಾರದು.

7ನೇ ದಿನಕ್ಕೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ಪರೀಕ್ಷಾ ವರದಿಯಲ್ಲಿ ಸೋಂಕು ಇದೆ ಎನ್ನುವುದು ನಮೂದಿಸಲ್ಪಟ್ಟಿದ್ದಲ್ಲಿ 72 ಗಂಟೆಗಳ ಬಳಿಕ ಇನ್ನೊಂದು ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ಇಲ್ಲ ಎನ್ನುವುದು ದೃಢಪಟ್ಟ ಬಳಿಕ ಮಾತ್ರ ಮನೆಗೆ ಕಳುಹಿಸಿಕೊಡಲಾಗುತ್ತದೆ. ವ್ಯಕ್ತಿ 14 ದಿನಗಳು ಮನೆಯಲ್ಲಿ ಕ್ವಾರಂಟೈನ್‌ಗೆ ಒಳಪಡಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು