ಶನಿವಾರ, ಜುಲೈ 31, 2021
20 °C

ಮರ ಸ್ಥಳಾಂತರದ ವಿವರ ನೀಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೆಟ್ರೊ ರೈಲು ಮಾರ್ಗದ ಕಾಮಗಾರಿಗಾಗಿ ಮರಗಳನ್ನು ಸ್ಥಳಾಂತರಿಸಲು ಉದ್ದೇಶಿಸಿರುವ ನಿರ್ದಿಷ್ಟ ಸ್ಥಳದ ವಿವರ ಸಲ್ಲಿಸುವಂತೆ ಮರಗಳ ತಜ್ಞರ ಸಮಿತಿಗೆ (ಟಿಇಸಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

ಟಿಇಸಿ ಕಾರ್ಯನಿರ್ವಹಣೆ ಬಗ್ಗೆ ಮಾರ್ಗಸೂಚಿ ರೂಪಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು.

‘ಮರಗಳು ಇರುವ ಜಾಗದಿಂದ ಸಮೀಪದ ಸ್ಥಳಗಳನ್ನು ಗುರುತಿಸಿ ಅಂದೇ ಸ್ಥಳಾಂತರ ಮಾಡಬೇಕಾಗುತ್ತದೆ. ನಿರ್ದಿಷ್ಟ ಜಾಗವನ್ನು ಟಿಇಸಿ ಅಂತಿಮಗೊಳಿಸಿದ ಬಳಿಕವೇ ಸ್ಥಳಾಂತರ ಮಾಡಬೇಕು’ ಎಂದು ಪೀಠ ತಿಳಿಸಿತು.

‘ಮರಗಳ ಸಂರಕ್ಷಣಾ ಕಾಯ್ದೆಯಡಿ ಇರುವ ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಳಾಂತರ ಮಾಡಬೇಕು. ಸ್ಥಳಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ನಿರ್ದೇಶನ ನೀಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು