‘ಶನಿವಾರ ರಾತ್ರಿ 8.30ರ ಸುಮಾರಿಗೆ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಮೊಹಮ್ಮದ್ ಉಲ್ಲಾಖಾನ್ ಅವರು ಬೈಕ್ ಚಲಾಯಿಸುತ್ತಿದ್ದರು. ಜಾಮಿಯಾ ಮಸೀದಿ ಎದುರು ದ್ವಿಚಕ್ರ ವಾಹನವನ್ನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು. ಮುಂದೆ ತೆರಳುತ್ತಿದ್ದ ಆಟೊಗೆ ಡಿಕ್ಕಿಯಾದ ಪರಿಣಾಮ ರೆಹಮಾನ್ ಅವರಿಗೆ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಭಾನುವಾರ ಮೃತಪಟ್ಟಿದ್ದಾರೆ’ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.