ಬುಧವಾರ, ಮೇ 12, 2021
18 °C

ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಟ್ರಕ್‌ನಲ್ಲಿ ಸಾಗಿಸುತ್ತಿದ್ದ 90 ಕೆ.ಜಿ ಗಾಂಜಾ ಜಪ್ತಿ ಮಾಡಿರುವ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕದ (ಎನ್‌ಸಿಬಿ) ಅಧಿಕಾರಿಗಳು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಎ. ಕುಮಾರ್ ಹಾಗೂ ಜೆಡ್. ಹುಸೇನ್ ಬಂಧಿತರು. ಕರ್ನಾಟಕದವರೇ ಆದ ಅವರು, ಆಂಧ್ರಪ್ರದೇಶಕ್ಕೆ ಹೋಗಿ ಗಾಂಜಾ ಖರೀದಿಸಿ ಟ್ರಕ್‌ನಲ್ಲಿ ನಗರಕ್ಕೆ ತರುತ್ತಿದ್ದರು’ ಎಂದು ಎನ್‌ಸಿಬಿ ಬೆಂಗಳೂರು ವಲಯದ ನಿರ್ದೇಶಕ ಅಮಿತ್‌ ಘಾವಟೆ ‘ಪ್ರಜಾವಾಣಿ’ಗೆ ತಿಳಿಸಿದರು.

‘ಗಾಂಜಾ ಸಾಗಣೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ, ದೇವನಹಳ್ಳಿ ಬಳಿ ತೆರಳಿ ವಾಹನಗಳ ಪರಿಶೀಲನೆ ಆರಂಭಿಸಲಾಯಿತು. ಅದೇ ಸಂದರ್ಭದಲ್ಲೇ ಸ್ಥಳಕ್ಕೆ ಬಂದಿದ್ದ ಟ್ರಕ್‌ ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಯಿತು’ ಎಂದೂ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.