ಕೆ.ಆರ್.ಪುರ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಜನರ ಜೀವನಮಟ್ಟವನ್ನು ಸುಧಾರಿಸಲು ಶಿಕ್ಷಣವೊಂದು ಪ್ರಮುಖ ಅಸ್ತ್ರವಾಗಿದೆ’ ಎಂದು ನಟ ಚೇತನ್ ಅಹಿಂಸಾ ಹೇಳಿದರು.
ಕೆ.ಆರ್.ಪುರ ಸಮೀಪದ ಬಿದರಹಳ್ಳಿಯಲ್ಲಿ ಅಖಿಲ ಕರ್ನಾಟಕ ಡಾ.ಬಾಬು ಜಗಜೀವನ್ ರಾಮ್ ಸೇವಾ ಟ್ರಸ್ಟ್ ಉದ್ಘಾಟನೆ ಮತ್ತು 10ನೇ ತರಗತಿ ಮತ್ತು ದ್ವೀತಿಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಿಕ್ಷಣ ಅತಿಮುಖ್ಯವಾಗಿದೆ. ಅಂಬೇಡ್ಕರ್ ಅವರು ಶಿಕ್ಷಣ ಪಡೆಯುವ ಮೂಲಕ ಜಗತ್ತಿಗೆ ಮಾದರಿಯಾಗುವಂತಹ ಸಂವಿಧಾನವನ್ನು ರಚನೆ ಮಾಡಿದರು. ಅವರು ತೋರಿದ ದಾರಿಯಲ್ಲಿ ಪ್ರತಿಯೊಬ್ಬರೂ ಸಾಗಬೇಕು ’ಎಂದರು.
ಅಖಿಲ ಕರ್ನಾಟಕ ಡಾ.ಬಾಬು ಜಗಜೀವನ್ ರಾಮ್ ಸೇವಾ ಟ್ರಸ್ಟ್‌ನ ಅಧ್ಯಕ್ಷ ವಿ.ಕೃಷ್ಣಮೂರ್ತಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹೂಡಿ ರಾಮಚಂದ್ರ, ಟ್ರಸ್ಟ್‌ನ ಗೌರವಾಧ್ಯಕ್ಷ ಮಾದೇಶ್ ಎಂ. ಪ್ರಧಾನ ಕಾರ್ಯದರ್ಶಿ ಬಿ.ಆರ್.ಮಾದೇಶ್, ಮುನಿಅಂಜನಿ, ವಿಮಲ, ಎಸ್.ನಾಗರಾಜ್, ಚಂದ್ರಶೇಖರ್, ನಾಗರಾಜ್, ವೆಂಕಟಸ್ವಾಮಿ ಹಾಜರಿದ್ದರು.