ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೈದ್ಯಕೀಯ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಿ’

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ
Last Updated 21 ಆಗಸ್ಟ್ 2020, 21:03 IST
ಅಕ್ಷರ ಗಾತ್ರ

ಬೆಂಗಳೂರು: ‘ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ಭಾಷೆಯನ್ನಾಗಿಕಡ್ಡಾಯವಾಗಿ ಕಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೋಗಿಗಳೊಂದಿಗೆ ಉತ್ತಮವಾಗಿ ಸಂವಹನ ನಡೆಸಿ, ಚಿಕಿತ್ಸೆ ಒದಗಿಸಲು ಸಾಧ್ಯವಾಗುತ್ತದೆ’ ಎಂದು ಕನ್ನಡ ಅಭಿವೃದ್ಥಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದರು.

ಕನ್ನಡ ಅನುಷ್ಠಾನದ ಕುರಿತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಜತೆಗೆ ಪ್ರಾಧಿಕಾರವು ಆನ್‌ಲೈನ್‌ ಮೂಲಕ ಶುಕ್ರವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ಹಳ್ಳಿಗಳಲ್ಲಿ ಸೇವೆ ಸಲ್ಲಿಸುವಾಗ ಜನಭಾಷೆಯಲ್ಲಿ ರೋಗಿಗಳನ್ನು ಆತ್ಮೀಯವಾಗಿ ಮಾತನಾಡಿಸಿ, ಸಮಸ್ಯೆ ಅರಿತರೆ ಸುಲಭವಾಗಿ ಚಿಕಿತ್ಸೆ ನೀಡಲು ಸಾಧ್ಯ. ಹಾಗಾಗಿ ಕನ್ನಡ ಕಲಿಕೆಗೆ ಕ್ರಮಕೈಗೊಳ್ಳಬೇಕು’ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸಚ್ಚಿದಾನಂದ ಅವರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT