ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಚೇತರಿಸಿಕೊಂಡ 104 ಮಂದಿಗೆ ಕ್ಷಯ ರೋಗ

Last Updated 31 ಆಗಸ್ಟ್ 2021, 23:16 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನಿಂದ ಚೇತರಿಸಿಕೊಂಡವರ ಪೈಕಿ 104 ಮಂದಿಯಲ್ಲಿ ಹಾಗೂ ಸಂಪರ್ಕಿತ 51 ಮಂದಿಯಲ್ಲಿ ಕ್ಷಯ ರೋಗ ಪತ್ತೆಯಾಗಿದೆ.

‘ಕೊರೊನಾ ಸೋಂಕಿತರು ಗುಣಮುಖರಾದ ಬಳಿಕಕ್ಷಯರೋಗ ಕಾಣಿಸಿಕೊಳ್ಳುತ್ತಿದೆ’ ಎಂಬ ವದಂತಿಗಳು ಹರಿದಾಡಿದ್ದವು. ಹೀಗಾಗಿ, ರಾಜ್ಯದಾದ್ಯಂತ ಆರೋಗ್ಯ ಇಲಾಖೆಯುಆ.16ರಿಂದ ಆ.31ರವರೆಗೆ ಕ್ಷಯರೋಗ ತಪಾಸಣೆ ಅಭಿಯಾನ ಹಮ್ಮಿಕೊಂಡಿತ್ತು. 15 ದಿನಗಳ ಅವಧಿಯಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡವರಿಗೆ ತಪಾಸಣೆ ನಡೆಸಿ, ಲಕ್ಷಣಗಳು ಗೋಚರಿಸಿದವರಿಗೆ ಪರೀಕ್ಷೆ ನಡೆಸಲಾಗಿದೆ.

‌‘ಕೋವಿಡ್ ಮತ್ತು ಕ್ಷಯರೋಗವು ಕೆಮ್ಮು, ಜ್ವರ ಮತ್ತು ಉಸಿರಾಟ ಸಂಬಂಧಿ ಲಕ್ಷಣಗಳುಳ್ಳ ಶ್ವಾಸಕೋಶಕ್ಕೆ ಸಂಬಂಧಿ
ಸಿದ ಕಾಯಿಲೆಗಳಾಗಿವೆ. ಕ್ಷಯರೋಗವು ಕೋವಿಡ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸುತ್ತವೆ. ಕ್ಷಯ ಮತ್ತು ಕೋವಿಡ್ ತ್ವರಿತ ಹಾಗೂ ತೀವ್ರ ರೋಗ ಲಕ್ಷಣಗಳ ಬೆಳವಣಿಗೆಗೆ ಸಂಬಂಧಿಸಿದೆ. ಈ ಎರಡೂ ರೋಗ
ಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ, ಚಿಕಿತ್ಸೆ ಒದಗಿಸಬೇಕಾಗುತ್ತದೆ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘ಅಭಿಯಾನದ ಅವಧಿಯಲ್ಲಿ ಕ್ಷೇತ್ರ ಮಟ್ಟದ ಆರೋಗ್ಯ ಕಾರ್ಯಕರ್ತರು ಕೋವಿಡ್‌ನಿಂದ ಚೇತರಿಕೊಂಡ ವ್ಯಕ್ತಿಗಳ ಮನೆಗಳಿಗೆ ಭೇಟಿ ನೀಡಿ, ಲಕ್ಷಣಗಳ ಆಧಾರದಲ್ಲಿ ಅವರ ಹಾಗೂ ಸಂಪರ್ಕಿತ ಸದಸ್ಯರ ಕಫದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಅದನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಟಿ.ಬಿ.ಪಿ.ಸಿ.ಆರ್ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆ’ ಎಂದು ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT