ಮಂಗಳವಾರ, ಜುಲೈ 5, 2022
25 °C

ನಗರಾಭಿವೃದ್ಧಿ: ತುಕಾರಾಮ ಉಪ ಕಾರ್ಯದರ್ಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಯಾಗಿ (ಬಿಬಿಎಂಪಿ) ತುಕಾರಾಮ ಕಲ್ಯಾಣಕರ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ನಗರಾಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ–3 ಆಗಿದ್ದ ಕೆಎಎಸ್‌ ಹಿರಿಯ ಶ್ರೇಣಿ ಅಧಿಕಾರಿ ಎಲಿಷ ಆ್ಯಂಡ್ರೂಸ್‌ ಅವರನ್ನು ರಾಜ್ಯ ಸರ್ಕಾರ ಏಪ್ರಿಲ್‌ 22ರಂದು ಅಮಾನತು ಮಾಡಿತ್ತು. ಕಡತ ವಿಲೇವಾರಿ ವೇಳೆ ವಿಳಂಬ ಧೋರಣೆ ಅನುಸರಿಸಿದ ಹಾಗೂ ಸರ್ಕಾರಿ ನೌಕರರ ತರವಲ್ಲದ ವರ್ತನೆ ತೋರಿದ ಆರೋಪವನ್ನು ಅವರು ಎದುರಿಸುತ್ತಿದ್ದರು. ಕಳೆದ ಒಂದು ತಿಂಗಳಿಂದ ಉಪ ಕಾರ್ಯದರ್ಶಿ ಹುದ್ದೆ ಖಾಲಿ ಇತ್ತು.

ಸಂಘ ಪರಿವಾರದ ಹಿರಿಯ ಮುಖಂಡರೊಬ್ಬರ ಶಿಫಾರಸಿನ ಮೇರೆಗೆ ತುಕಾರಾಮ ಅವರನ್ನು ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯ ಸೇವೆಗೆ ಸೇರಿದ ತುಕಾರಾಮ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.