ಬುಧವಾರ, ಸೆಪ್ಟೆಂಬರ್ 29, 2021
21 °C

ತುಮಕೂರು ರಸ್ತೆ: ಸಂಚಾರ ಮಾರ್ಪಾಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯು ತುಮಕೂರು ರಸ್ತೆಯಲ್ಲಿ ಗೊರಗುಂಟೆಪಾಳ್ಯ ಮೆಟ್ರೊನಿಲ್ದಾಣದಿಂದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೊ ನಿಲ್ದಾಣದವರೆಗೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಇದೇ 15ರಿಂದ (ಬುಧವಾರ) ಆರಂಭಿಸಲಿದೆ.

‘1.9 ಕಿ.ಮೀ ಉದ್ದದ ರಸ್ತೆಯನ್ನು ವೈಟ್‌ ಟಾಪಿಂಗ್‌ ಮಾಡಲಾಗುತ್ತದೆ. ಈ ರಸ್ತೆಯು 15 ಮೀ ಅಗಲವಿದೆ. ಅರ್ಧ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭಿಸಿ, ಇನ್ನುಳಿದ ಅರ್ಧ ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು’ ಎಂದು ಬಿಬಿಎಂಪಿಯ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

‘ವೈಟ್ ಟಾಪಿಂಗ್ ಕಾಮಗಾರಿಯು ಪೂರ್ಣಗೊಳ್ಳುವವರೆಗೂ ವಾಹನಗಳು ಇಲ್ಲಿನ ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬಹುದು. ಕಾಮಗಾರಿಗೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಅವರು ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.