ಜಿಬಿಎ ರದ್ದುಗೊಳಿಸಲಿ: ಸವಾಲು
‘ಬಿಜೆಪಿಯವರು ಅಧಿಕಾರಕ್ಕೆ ಬಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (ಜಿಬಿಎ) ರದ್ದುಗೊಳಿಸಲಿ’ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
‘ಬಿಜೆಪಿಯವರು ಅಧಿಕಾರಕ್ಕೆ ಬಂದಾಗ, ಏನು ಬೇಕಾದರೂ ಮಾಡಲಿ. ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಅವರ ಹಣೆಯಲ್ಲಿ ಬರೆದಿಲ್ಲ. ಇದು ಹೀಗೆ ಮುಂದುವರಿಯಲಿದೆ. ಅವರಿಗೆ ಜಿಬಿಎ ಬೇಡವಾದರೆ ಮುಂಬರುವ ನಗರ ಪಾಲಿಕೆಗಳ ಚುನಾವಣೆ ಬಹಿಷ್ಕರಿಸಲಿ. ಚುನಾವಣೆಯಿಂದ ಹಿಂದೆ ಸರಿಯಲಿ ನೋಡೋಣ. ಅವರ ಕಾರ್ಯಕರ್ತರೆಲ್ಲರೂ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗುತ್ತಿದ್ದಾರೆ’ ಎಂದು ಹೇಳಿದರು.