ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರಕ್ಕಾಗಿಯೇ ಸರ್ಕಾರದಿಂದ ಸುರಂಗ ಮಾರ್ಗ: ಎಎಪಿ ಆರೋಪ

Published 31 ಜನವರಿ 2024, 15:48 IST
Last Updated 31 ಜನವರಿ 2024, 15:48 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರ ನಡೆಸುವುದಕ್ಕಾಗಿಯೇ ಸುರಂಗ ಮಾರ್ಗ ನಿರ್ಮಾಣ ಮಾಡಲು ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮುಂದಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಬೇಕಿದ್ದರೆ ಸುರಂಗ ರಸ್ತೆಯ ಬದಲು ಉಪನಗರ ರೈಲು ಮತ್ತು ಮೆಟ್ರೊ ಮಾರ್ಗಗಳನ್ನು ವಿಸ್ತರಣೆ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

‘60 ಕಿ,ಮೀ. ಸುರಂಗ ಮಾರ್ಗಕ್ಕೆ ₹30,000 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಅಂದರೆ 1 ಕಿ.ಮೀ. ಸುರಂಗ ಮಾರ್ಗಕ್ಕೆ ₹500 ಕೋಟಿ ವೆಚ್ಚ. ಸುರಂಗ ರಸ್ತೆ ನಿರ್ಮಾಣದಿಂದ ಎಷ್ಟು ವಾಹನದಟ್ಟಣೆ ಕಡಿಮೆಯಾಗಲಿದೆ ಎನ್ನುವ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಿಲ್ಲ‘ ಎಂದು ತಿಳಿಸಿದ್ದಾರೆ.

ಸುರಂಗ ರಸ್ತೆಗಳಿಂದ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲ್ಲ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ಕಟ್ಟಲಾಗಿದೆ. ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಈ ರೀತಿ ಇರುವಾಗ ಸುರಂಗ ರಸ್ತೆ ನಿರ್ಮಾಣ ಮಾಡಿದರೆ, ಸುರಕ್ಷತೆಯ ಬಗ್ಗೆ ಆತಂಕ ಕಾಡುತ್ತದೆ ಎಂದಿದ್ದಾರೆ.

ಈ ಬಗ್ಗೆ ಚರ್ಚಿಸಲು ಎಎಪಿ ವತಿಯಿಂದ ಫೆ.3ರಂದು ಶಾಸಕರ ಭವನದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ‘ಸುರಂಗ ರಸ್ತೆಯಾ? ಅಥವಾ ಉಪನಗರ ರೈಲಾ?' ಎನ್ನುವ ವಿಚಾರದ ಬಗ್ಗೆ ಅಂದು ಚರ್ಚಿಸಲಾಗುತ್ತದೆ. ನಗರ ತಜ್ಞರು, ಸಾಮಾಜಿಕ ಕ್ಷೇತ್ರದ ಪರಿಣಿತರು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಚರ್ಚೆಯ ನಿರ್ಣಯಗಳನ್ನು ಸರ್ಕಾರಕ್ಕೆ ತಲುಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT