ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರಹಳ್ಳಿ: ಟ್ರೀ ಪಾರ್ಕ್‌ ಬದಲು ಮಕ್ಕಳೋದ್ಯಾನ ಅಭಿವೃದ್ಧಿ

ತುರಹಳ್ಳಿ ಅರಣ್ಯಪ್ರದೇಶದಲ್ಲಿನ ವೃಕ್ಷೋದ್ಯಾನದಲ್ಲಿ ಚಟುವಟಿಕೆ ಆರಂಭ
Last Updated 14 ಮಾರ್ಚ್ 2021, 18:26 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ತುರಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಟ್ರೀ ಪಾರ್ಕ್‌ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಆ ನಿರ್ಧಾರದಿಂದ ಹಿಂದೆ ಸರಿದಿದ್ದ ಅರಣ್ಯ ಇಲಾಖೆಯು ಇದೇ ಅರಣ್ಯಪ್ರದೇಶದ ಮತ್ತೊಂದು ಭಾಗದಲ್ಲಿರುವ ವೃಕ್ಷೋದ್ಯಾನವನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ.

ತುರಹಳ್ಳಿ ಅರಣ್ಯದ ಶೋಭಾ ಫಾರೆಸ್ಟ್‌ ವ್ಯೂ ಅಪಾರ್ಟ್‌ಮೆಂಟ್‌ ಇರುವ ಭಾಗದಲ್ಲಿ ಈಗ ಅಸ್ತಿತ್ವದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ಚಿಲ್ಡ್ರನ್‌ ಪಾರ್ಕ್‌, ಬಯಲು ವ್ಯಾಯಾಮ ಶಾಲೆ ಹಾಗೂ ಕುಡಿಯುವ ನೀರಿನ ಘಟಕ ನಿರ್ಮಾಣ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಪ್ರಾರಂಭಿಸಿದ್ದಾರೆ. ನಾಲ್ಕೈದು ದಿನಗಳಿಂದ ಈ ಕೆಲಸ ನಡೆಯುತ್ತಿದೆ.

‘ಈ ವೃಕ್ಷೋದ್ಯಾನವನ್ನು ಸಕಲ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮೂರು–ನಾಲ್ಕು ತಿಂಗಳಲ್ಲಿ ಈ ಎಲ್ಲ ಸೌಲಭ್ಯ ಕಲ್ಪಿಸುವ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ಅರಣ್ಯದ 38 ಎಕರೆ ಪ್ರದೇಶದಲ್ಲಿ ಈಗಾಗಲೇ ಇಲ್ಲಿ ಟ್ರೀ ಪಾರ್ಕ್‌ ನಿರ್ಮಾಣವಾಗಿದೆ. 2011ರಲ್ಲಿ ಪ್ರಾರಂಭವಾದ ಕಾಮಗಾರಿ 2018ರಲ್ಲಿ ಪೂರ್ಣಗೊಂಡಿತ್ತು. ಆದರೆ, ಸಮರ್ಪಕವಾಗಿ ನಿರ್ವಹಿಸದ ಕಾರಣ ಹಾಳು ಬಿದ್ದಂತಾಗಿತ್ತು. ಈ ನಡುವೆಯೇ, ಅರಣ್ಯ ಪ್ರದೇಶದ ಇನ್ನೊಂದು ಭಾಗದಲ್ಲಿ ಮತ್ತೊಂದು ಟ್ರೀ ಪಾರ್ಕ್‌ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾದಾಗ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದರು.

‘ಈಗಾಗಲೇ ಇರುವ ವೃಕ್ಷೋದ್ಯಾನವನ್ನು ಅರಣ್ಯ ಇಲಾಖೆ ಅಭಿವೃದ್ಧಿ ಪಡಿಸಬೇಕು. ಸಾರ್ವಜನಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಎಲ್ಲ ಸೌಲಭ್ಯ ಕಲ್ಪಿಸಬೇಕು. ಈ ಪ್ರದೇಶದ ರಕ್ಷಣೆಗೆ ಸುತ್ತ ತಂತಿ ಬೇಲಿ ನಿರ್ಮಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದರು.

‘ತುರಹಳ್ಳಿ ಕಾಡು ಕೆಡಿಸಲು ತರಾತುರಿ’ ಶೀರ್ಷಿಕೆಯಡಿ ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT