ಶನಿವಾರ, ಮೇ 8, 2021
19 °C

ತುರಹಳ್ಳಿ ಅರಣ್ಯಕ್ಕೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ.

‘ಸಂಜೆ ಐದು ಗಂಟೆ ಸುಮಾರಿಗೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದು ಸ್ಥಳೀಯರ ಗಮನಕ್ಕೆ ಬಂದ ಕೂಡಲೇ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಿದರು. ಅಂದಾಜು ಐದು ಎಕರೆಯಷ್ಟು ಅರಣ್ಯದ ಪ್ರದೇಶಕ್ಕೆ ಹಾನಿಯಾಗಿದೆ’ ಎಂದು ಸ್ಥಳೀಯ ನಿವಾಸಿ ಮಂಜುನಾಥ್ ಚಾಂದ್ ‘ಪ್ರಜಾವಾಣಿ’ಗೆ ತಿಳಿಸಿದರು. 

‘ಈ ಭಾಗದಲ್ಲಿ ಬೆಂಕಿ ಬಿದ್ದಿರುವುದು ಇದೇ ಮೊದಲ ಬಾರಿ ಅಲ್ಲ. 15 ದಿನಗಳ ಹಿಂದೆಯೂ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅರಣ್ಯಕ್ಕೆ ತಡೆಗೋಡೆಗಳನ್ನು ನಿರ್ಮಿಸಲಾಗಿದ್ದರೂ, ಸೂಕ್ತ ಭದ್ರತೆ ಇಲ್ಲವಾಗಿದೆ. ಇದರಿಂದ ಪದೇ ಪದೇ ಇಂತಹ ಅವಘಡಗಳು ಸಂಭವಿಸುತ್ತಿವೆ‌’ ಎಂದರು.

ಈ ಬಗ್ಗೆ ಪ್ರತಿಕ್ರಿಯೆಗೆ ಅರಣ್ಯಾಧಿಕಾರಿ ಲಭ್ಯರಾಗಲಿಲ್ಲ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು