ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ, ನಿವಾಸಿಯೊಬ್ಬರು ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು ಮನವಿ ಮಾಡಿದರು.

ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ‘ಪಾಲಿಕೆ ವ್ಯಾಪ್ತಿಯಲ್ಲಿ 200 ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಲಾಗುತ್ತಿದೆ. ಈ ಸಂಬಂಧ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಖಾಲಿ ಜಾಗ/ ಸಾರ್ವಜನಿಕ ಸ್ಥಳಗಳನ್ನು ಗುರುತಿಸಬೇಕು. ಆ ಬಳಿಕ ಟೆಂಡರ್ ಕರೆದು ಕಾಲಮಿತಿಯೊಳಗಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು’ ಎಂದು ಹೇಳಿದರು.

ಕೆ.ಆರ್. ಪುರ ವ್ಯಾಪ್ತಿಯ ಆರ್.ಎನ್.ಎಸ್ ಕಾಲೊನಿ, ಜೈಭುವನೇಶ್ವರಿ ಬಡಾವಣೆ, ಬನಶಂಕರಿ ಬಡಾವಣೆ ಸುತ್ತಮುತ್ತಲಿನ ಚರಂಡಿಗಳ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದ ಸೊಳ್ಳೆಕಾಟ ಹೆಚ್ಚಾಗಿದೆ ಎಂದು ನಾಗರಿಕರು ದೂರಿದರು. ‘ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರು ಸ್ಥಳ ಪರಿಶೀಲನೆ ನಡೆಸಬೇಕು. ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ಔಷಧ ಸಿಂಪಡಣೆ ಹಾಗೂ ಫಾಗಿಂಗ್ ಮಾಡಿ ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆರೋಗ್ಯ ವೈದ್ಯಾಧಿಕಾರಿಗೆ ಮುಖ್ಯ ಆಯುಕ್ತರು ಸೂಚಿಸಿದರು.

ಕಳೆದ ಬಾರಿಯ ಕಾರ್ಯಕ್ರಮದಲ್ಲಿ ನಾಗರಿಕರು ಸಲ್ಲಿಸಿದ ಬಹುತೇಕ ದೂರುಗಳಿಗೆ ಪರಿಹಾರ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ 30ಕ್ಕೂ ಹೆಚ್ಚು ದೂರುಗಳು ಬಂದಿವೆ. ಅವುಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ತುಷಾರ್ ಗಿರಿನಾಥ್ ಸೂಚಿಸಿದರು.

ವಲಯ ಆಯುಕ್ತ ರಮೇಶ್, ವಲಯ ಜಂಟಿ ಆಯುಕ್ತೆ ದಾಕ್ಷಾಯಿಣಿ, ಪ್ರಧಾನ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್, ಉಪ ಆಯುಕ್ತ ಶಶಿ ಕುಮಾರ್, ಮುಖ್ಯ ಎಂಜಿನಿಯರ್ ಲೋಕೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.