ಬೆಂಗಳೂರು: ನಗರದ ಹಲವು ಭಾಗಗಳಲ್ಲಿರುವ ಸುಮಾರು 1800 ರಸ್ತೆ ಗುಂಡಿಗಳನ್ನು ಶೀಘ್ರವಾಗಿ ಮುಚ್ಚಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಸೂಚಿಸಿದರು.

ಅಧಿಕಾರಿಗಳೊಂದಿಗೆ ಮಂಗಳವಾರ ರಾತ್ರಿ ಸಭೆ ನಡೆಸಿದ ಅವರು, ಮಳೆ ವಾತಾವರಣ ಇರುವುದರಿಂದ ಕೋಲ್ಡ್ ಮಿಕ್ಸ್ ಹಾಗೂ ಇಕೋ ಫಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ವಲಯಗಳಲ್ಲಿ ಗುತ್ತಿಗೆದಾರರ ಮೂಲಕ ಅವಶ್ಯ ಡಾಂಬರನ್ನು ಪಡೆದು ತ್ವರಿತಗತಿಯಲ್ಲಿ ದುರಸ್ತಿ ಕಾಮಗಾರಿ ನಡೆಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ವರದಿಯನ್ನು ಪ್ರತಿ ನಿತ್ಯ ನೀಡಬೇಕು ಎಂದು ಆದೇಶಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ₹690 ಕೋಟಿ ವೆಚ್ಚದಲ್ಲಿ ರಸ್ತೆಗಳಿಗೆ ಡಾಂಬರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು. ಮಳೆಗಾಲದ ವೇಳೆ 82 ಕಡೆ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಅದನ್ನು ತಪ್ಪಿಸುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಪ್ರವಾಹ ಉಂಟಾಗುವ ಪ್ರದೇಶಗಳು ಹಾಗೂ ರಸ್ತೆಗಳಿಗೆ ಆದ್ಯತೆ ನೀಡಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.