ಬೆಂಗಳೂರು: ಕಿರುತೆರೆಯ ನಟಿಯೂ ಆಗಿರುವ ಪತ್ನಿಯನ್ನು ಅಪಹರಣ ಮಾಡಿರುವ ಆರೋಪದ ಅಡಿ ಪತಿ, ಚಿತ್ರ ನಿರ್ಮಾಪಕರೊಬ್ಬರ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಟಿ ಚೈತ್ರಾ ಅಪಹರಣಕ್ಕೆ ಒಳಗಾದವರು. ಇವರ ಪತಿ ಹರ್ಷವರ್ಧನ್ ಆರೋಪಿ.

ನಟಿಯ ಸಹೋದರಿ ನೀಡಿರುವ ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

‘ಚೈತ್ರಾ, ಹರ್ಷವರ್ಧನ್ 2023ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಕೌಟುಂಬಿಕ ಕಲಹದಿಂದ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪತಿ ಹರ್ಷವರ್ಧನ್ ಹಾಸನದಲ್ಲಿ ನೆಲಸಿದ್ದರೆ, ಚೈತ್ರಾ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಚೈತ್ರಾ ಅವರು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಮಗು ನೀಡದ ಕಾರಣಕ್ಕೆ ಪತ್ನಿಯನ್ನು ಹರ್ಷವರ್ಧನ್ ಅವರು ಅಪಹರಣ ಮಾಡಿದ್ದರು ಎಂಬ ಆರೋಪವಿದೆ.

‘ಚೈತ್ರಾ ಅವರ ತಾಯಿ ಸಿದ್ದಮ್ಮ ಅವರಿಗೆ ಹರ್ಷವರ್ಧನ್ ಕರೆ ಮಾಡಿ, ‘ನಿಮ್ಮ ಮಗಳನ್ನು ನಾನೇ ಅಪಹರಿಸಿದ್ದೇನೆ. ಆಕೆಯನ್ನು ಬಿಡಬೇಕಾದರೆ ನನ್ನ ಮಗಳನ್ನು ನನ್ನ ಬಳಿಗೆ ಕಳುಹಿಸಬೇಕು. ಮಗು ಸಿಕ್ಕಿದರೆ ಮಾತ್ರ ಚೈತ್ರಾಳನ್ನು ಬಿಡುತ್ತೇನೆ’ ಎಂಬುದಾಗಿ ಬೆದರಿಸಿದ್ದರು’ ಎಂದು ದೂರು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.