ಬೆಂಗಳೂರು: ವಾಹಿನಿಯೊಂದರ ಚರ್ಚೆ ವೇಳೆ ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಹೋರಾಟಗಾರ ಹರೀಶ್ ಬೈರಪ್ಪ ಅವರ ವಿರುದ್ಧ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಗಂಭೀರ ಸ್ವರೂಪವಲ್ಲದ ಪ್ರಕರಣ(ಎನ್ಸಿಆರ್) ದಾಖಲಿಸಿಕೊಂಡಿದ್ದಾರೆ.

ವಸಂತ್ ಗಿಳಿಯಾರ್ ನೀಡಿದ ದೂರಿನ ಮೇರೆಗೆ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ವಸಂತ್ ಗಿಳಿಯಾರ್, ಅಬ್ದುಲ್ ರಜಾಕ್ ಮತ್ತು ಹರೀಶ್ ಬೈರಪ್ಪ ಅವರು ಗುರುವಾರ ವಾಹಿನಿಯೊಂದರ ಚರ್ಚೆಯಲ್ಲಿ ಭಾಗಿ ಆಗಿದ್ದರು. ಆಗ ಹರೀಶ್ ಬೈರಪ್ಪ ಮತ್ತು ವಸಂತ್ ಗಿಳಿಯಾರ್ ನಡುವೆ ವಾಗ್ವಾದ ನಡೆದಿತ್ತು. ಅದು ವಿಕೋಪಕ್ಕೆ ಹೋದಾಗ ಹರೀಶ್ ಬೈರಪ್ಪ, ವಸಂತ್ ಗಿಳಿಯಾರ್ ಅವರಿಗೆ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ವಸಂತ್ ಗಿಳಿಯಾರ್ ಎಸ್.ಜೆ.ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.