ಬೆಂಗಳೂರು: ಕಿರುತೆರೆಯ ನಟಿಗೆ ಲೈಂಗಿಕ ಕಿರುಕುಳ ನೀಡಿ ಹಾಗೂ ಹಲ್ಲೆಗೆ ಯತ್ನಿಸಿದ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

‘ನಾಯಂಡಹಳ್ಳಿಯಲ್ಲಿ ವಾಸವಾಗಿದ್ದ ಆರೋಪಿ ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿ ತೆಲುಗಿನ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದ. ಕಳೆದ ವರ್ಷ ಸಂತ್ರಸ್ತೆ ನಟಿಯನ್ನು ಪರಿಚಯಿಸಿಕೊಂಡಿದ್ದ ಚರಿತ್, ಕಾಲಕ್ರಮೇಣ ಆಕೆಯೊಂದಿಗೆ ಸಲುಗೆಯಿಂದ ಓಡಾಡಿಕೊಂಡಿದ್ದ. ಪ್ರೀತಿಸುವಂತೆ ಆಕೆಗೆ ಒತ್ತಾಯಿಸುತ್ತಿದ್ದ. ಆದರೆ ಆಕೆ ನಿರಾಕರಿಸಿದ್ದರು. ಪ್ರೀತಿ ನೆಪದಲ್ಲಿ ದೈಹಿಕ ಸಂಪರ್ಕ ಇಟ್ಟುಕೊಳ್ಳಲು ಒತ್ತಾಯಿಸಿದ್ದ. ಹಣ ಕೊಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಜೀವ ಬೆದರಿಕೆ ಹಾಕಿದ್ದಾನೆ’ ಎಂದು ದೂರಿನಲ್ಲಿ ನಟಿ ವಿವರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ದೈಹಿಕ ಸಂಪರ್ಕ ಇಟ್ಟುಕೊಳ್ಳಲು ನಿರಾಕರಿಸಿದರೆ ಖಾಸಗಿ ಕ್ಷಣದ ಫೋಟೊ, ವಿಡಿಯೊವನ್ನು ಸಾಮಾಜಿಕ ಜಾಲತಾಣಕ್ಕೆ ಅಪಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮನೆಗೆ ಸಹಚರರ ಜೊತೆ ನುಗ್ಗಿ ಕಿರುಕುಳ ನೀಡಿದ್ದಾನೆ. ರಾಜಕಾರಣಿಗಳು, ಪೊಲೀಸರು ಹಾಗೂ ರೌಡಿಗಳ ಪರಿಚಯವಿದೆ. ಸುಳ್ಳು ಪ್ರಕರಣ ಹಾಕಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿ, ಹಲವು ಬಾರಿ ಹಲ್ಲೆ ಮಾಡಿದ್ದಾನೆ’ ಎಂದು ನಟಿ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕೆಲ ವರ್ಷಗಳ ಹಿಂದೆ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದ ಚರಿತ್, ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡುವಂತೆ ಪತ್ನಿ ನೋಟಿಸ್ ಕಳುಹಿಸಿದ್ದಕ್ಕೆ ಬೆದರಿಕೆ ಹಾಕಿದ್ದ. ಈ ಸಂಬಂಧ ಸರ್ಜಾಪುರ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.