ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫೀಮು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ₹ 3.30 ಕೋಟಿ ಮೌಲ್ಯದ ಡ್ರಗ್ಸ್ ವಶ

Last Updated 23 ಸೆಪ್ಟೆಂಬರ್ 2020, 10:55 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತು ಅಫೀಮು ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಇಬ್ಬರನ್ನು ಸಿಟಿ ಮಾರುಕಟ್ಟೆ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹3.30 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾಗಡಿ ರಸ್ತೆಯಲ್ಲಿ ವಾಸವಿದ್ದ ರಾಜುರಾಮ್ ಬಿಷ್ಣೋಯ್ (31) ಹಾಗೂ ಕುಂಬಳಗೋಡಿನ ನಿವಾಸಿ ಸುನಿಲ್ ಕುಮಾರ್ (21) ಬಂಧಿತರು.

ಬಂಧಿತ ಆರೋಪಿಗಳು

ಸಿಟಿ ಮಾರುಕಟ್ಟೆ ಠಾಣಾ ವ್ಯಾಪ್ತಿಯ ಮೆಟ್ರೊ ನಿಲ್ದಾಣದ ಪಾರ್ಕಿಂಗ್ ಜಾಗದ ರಸ್ತೆಯಲ್ಲಿ ಆರೋಪಿಗಳು ಅಫೀಮು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.

ತನಿಖೆ ವೇಳೆ ಆರೋಪಿಗಳ ಮನೆಯಲ್ಲಿ ₹3.30 ಲಕ್ಷ ಬೆಲೆಬಾಳುವ ಮಾದಕ ವಸ್ತುಗಳು ಪತ್ತೆಯಾಗಿದ್ದು, 1.2 ಕೆ.ಜಿ. ಬ್ರೌನ್ ಶುಗರ್, 475 ಗ್ರಾಂ ಅಫೀಮು, 25 ಎಲ್‍ಎಸ್‍ಡಿ ಸ್ಟ್ರಿಪ್ಸ್, 32 ಗ್ರಾಂ ಎಂಡಿಎಂಎ ಫಾಯಿಲ್ ರೋಲ್‍ಗಳು, 3 ಮೊಬೈಲ್, 2 ದ್ವಿಚಕ್ರ ವಾಹನ ಹಾಗೂ 3 ತೂಕದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT