ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಹಿದುಲ್ ಇಸ್ಲಾಂ(35) ಮತ್ತು ಫೈರೋಡ್ಸ್ (32) ಬಂಧಿತರು.

ಆರೋಪಿಗಳು ಎರಡು ವರ್ಷಗಳಿಂದ ಹೆಬ್ಬಗೋಡಿ ಭಾಗದಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳ ಮೂಲಕ ಭಾರತ ಪ್ರವೇಶಿಸಿದ ಆರೋಪಿಗಳು, ನಗರದಲ್ಲಿ ವಾಸವಾಗಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕೆಲಸವಿಲ್ಲದ ವೇಳೆ ನಗರದಲ್ಲಿ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

6 ಎಫ್ಐಆರ್: ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಾಂಗ್ಲಾದೇಶ ಪ್ರಜೆಗಳು ವಾಸಿಸುತ್ತಿದ್ದು, ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿರುವ ಆರೋಪದಡಿ ವಾರದಲ್ಲಿ ಆರು ಎಫ್ಐಆರ್ ದಾಖಲಾಗಿವೆ. ಸುಮಾರು 15ಕ್ಕೂ ಹೆಚ್ಚು ಅಕ್ರಮ ವಾಸಿಗಳು ಇರುವುದನ್ನು ಶಂಕೆ ವ್ಯಕ್ತಪಡಿಸಿರುವ ತನಿಖಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.