ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಅಪಘಾತ: ಲೆಕ್ಕಾಧಿಕಾರಿ ಸೇರಿ ಇಬ್ಬರು ಸಾವು

Published 28 ಜನವರಿ 2024, 14:40 IST
Last Updated 28 ಜನವರಿ 2024, 14:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಶನಿವಾರ ರಾತ್ರಿ ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.


ಅರುಣ್‌ಕುಮಾರ್ (28) ಹಾಗೂ ಸುಜಿತ್ ಶಾ (32) ಮೃತರು. ಅಪಘಾತಗಳಿಗೆ ಸಂಬಂಧಿಸಿ ಕುಮಾರಸ್ವಾಮಿ ಲೇಔಟ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿವೆ.

‘ಜೆ.ಪಿ. ನಗರ ಬಳಿಯ ಸಾರಕ್ಕಿ ಲೇಔಟ್ ನಿವಾಸಿ ಅರುಣ್‌ಕುಮಾರ್, ಕಂಪನಿಯೊಂದರಲ್ಲಿ ಲೆಕ್ಕಾಧಿಕಾರಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ 11.30 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಅಂಜನಾಪುರದ 80 ಅಡಿ ರಸ್ತೆಯಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಹೇಳಿದರು.

‘ಅರುಣ್ ಅವರ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಉರುಳಿಬಿದ್ದಿದ್ದ ಅರುಣ್ ತಲೆಗೆ ತೀವ್ರ ಪೆಟ್ಟಾಗಿತ್ತು. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ಬಿಹಾರದ ಕಾರ್ಮಿಕ: ‘ಮೃತ ಸುಜಿತ್ ಶಾ, ಬಿಹಾರದವರು. ಕೆಲಸ ಹುಡುಕಿಕೊಂಡು ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು’ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಹೇಳಿದರು.

‘ಸುಜಿತ್ ಶಾ ಅವರು ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಚಿಕ್ಕ ನಾಗಮಂಗಲ ರಸ್ತೆಯಲ್ಲಿ ಹೊರಟಿದ್ದರು. ಇದೇ ಸಂದರ್ಭದಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಸುಜಿತ್‌ ಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT