ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಯಲ್ಲಿ ಇನ್ನೂ ಎರಡು ದಿನ ಮಳೆ

Last Updated 23 ನವೆಂಬರ್ 2022, 20:34 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಜಿಟಿಜಿಟಿ ಮಳೆ ಸುರಿಯಿತು. ಚಳಿಯ ಜೊತೆಗೆ ಮಳೆ ಸುರಿಯುತ್ತಿದೆ. ಇದರಿಂದ ವಾತಾವರಣ ಮತ್ತಷ್ಟು ಶೀತಮಯವಾಗಿತ್ತು.

ಬುಧವಾರ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಜಿಟಿಜಿಟಿ ಮಳೆ ಸುರಿಯಲು ಆರಂಭಿಸಿತು.

ನಾಗಸಂದ್ರ, 8ನೇ ಮೈಲು, ಜಾಲಹಳ್ಳಿ, ಪೀಣ್ಯ ಕೈಗಾರಿಕೆ ವಲಯ, ಕೆಂಗೇರಿ, ಯಶವಂತಪುರ, ಶ್ರೀರಾಮಪುರ, ಮಲ್ಲೇಶ್ವರ, ಯಲಹಂಕ, ರಾಜಾಜಿನಗರ ಭಾಗದಲ್ಲಿ ಮಳೆಯಾಗಿದೆ. ದೀಪಾಂಜಲಿ ನಗರ, ರಾಜರಾಜೇಶ್ವರಿ ನಗರ, ಮಾಗಡಿ ರಸ್ತೆ, ಬಸವನಗುಡಿ, ಬಸವೇಶ್ವರ ನಗರ, ಜೆಪಿ ನಗರ, ಕೆ.ಆರ್‌. ಮಾರುಕಟ್ಟೆ, ಚಿಕ್ಕಪೇಟೆ, ಹಲಸೂರು, ಎಲೆಕ್ಟ್ರಾನಿಕ್‌ ಸಿಟಿಯಲ್ಲೂ ಸಾಧಾರಣ ಮಳೆಯಾಗಿದೆ.

ನಗರದಲ್ಲಿ ಇನ್ನೂ ಎರಡು ದಿನ ಇದೇ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ಬುಧವಾರ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಹಾಗೂ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇತ್ತು. ಗುರುವಾರ ಕನಿಷ್ಠ 19, ಗರಿಷ್ಠ 26 ಹಾಗೂ ಶುಕ್ರವಾರ ಕನಿಷ್ಠ 19 ಹಾಗೂ ಗರಿಷ್ಠ 7 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ
ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT