ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಡಿಗೆ ಮನೆಯಲ್ಲಿ ಡ್ರಗ್ಸ್ ಸಂಗ್ರಹಿಸಿ ಮಾರಾಟ: ನೈಜೀರಿಯಾದ ಇಬ್ಬರ ಬಂಧನ

Last Updated 10 ನವೆಂಬರ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ವಿಕ್ಟರ್ ಹಾಗೂ ಚಿಕ್ ಬಂಧಿತರು. ಇವರಿಂದ ₹ 25 ಲಕ್ಷ ಮೌಲ್ಯದ ಎಂಡಿಎಂಎ, ಎಕ್ಸ್‌ಟೆಸ್ಸಿ ಮಾತ್ರೆಗಳು, ಎಲ್‌ಎಸ್‌ಡಿ ಕಾಗದ ಚೂರು ಹಾಗೂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ವಿದ್ಯಾರ್ಥಿ ಹಾಗೂ ವ್ಯಾಪಾರ ವೀಸಾದಡಿ ನಗರಕ್ಕೆ ಬಂದಿದ್ದ ಆರೋಪಿಗಳು, ಬಾಗಲಗುಂಟೆ ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಅಕ್ರಮವಾಗಿ ಹಣ ಸಂಪಾದಿಸಲು ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದರು. ಪೆಡ್ಲರ್ ಜೊತೆ ಒಡನಾಟ ಹೊಂದಿ, ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು’ ಎಂದರು.

‘ಬಾಡಿಗೆ ಮನೆಯಲ್ಲಿ ಡ್ರಗ್ಸ್ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ ಆರೋಪಿಗಳು, ಅದನ್ನು ಚಿಕ್ಕ ಪೊಟ್ಟಣಗಳಲ್ಲಿ ತುಂಬಿ ಮಾರುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಕಂಪನಿಗಳ ಉದ್ಯೋಗಿಗಳು, ಕೆಲ ಉದ್ಯಮಿಗಳು ಹಾಗೂ ಇತರರು ಆರೋಪಿಗಳ ಬಳಿ ಡ್ರಗ್ಸ್ ಖರೀದಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳ ಕೃತ್ಯದ ಬಗ್ಗೆ ಮಾಹಿತಿ ಬಂದಿತ್ತು. ದಾಳಿ ಮಾಡಿ ಬಂಧಿಸಲಾಯಿತು. ಮನೆಯಲ್ಲಿ ಶೋಧ ನಡೆಸಿದಾಗ ಮತ್ತಷ್ಟು ಡ್ರಗ್ಸ್ ಪತ್ತೆಯಾಯಿತು. 3 ಮೊಬೈಲ್‌ಗಳು, 2 ಲ್ಯಾಪ್‌ಟಾಪ್ ಸಹ ಜಪ್ತಿ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT