ಶನಿವಾರ, ಏಪ್ರಿಲ್ 1, 2023
25 °C

‘ಮನೆಯಿಂದಲೇ ಕೆಲಸ’ ಆಮಿಷವೊಡ್ಡಿ ವಂಚಿಸುತ್ತಿದ್ದವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮನೆಯಿಂದಲೇ ಕೆಲಸ ಮಾಡಿ, ಕೈ ತುಂಬ ಹಣ ಸಂಪಾದಿಸಿ’ ಎಂಬ ಆಮಿಷವೊಡ್ಡಿ ನೋಂದಣಿ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪದಡಿ ಇಬ್ಬರನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ತಮಿಳುನಾಡಿನ ಸೆನ್ನಪ್ಪನ್ ಹಾಗೂ ಸಂಜೀವ್ ಬಂಧಿತರು. ಅವರು ನಿರ್ವಹಣೆ ಮಾಡುತ್ತಿದ್ದ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ ₹ 3.50 ಕೋಟಿ ಪತ್ತೆಯಾಗಿದ್ದು, ಎಲ್ಲ ಖಾತೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಂಚನೆಯನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು, 11 ನಕಲಿ ಕಂಪನಿಗಳನ್ನು ಸೃಷ್ಟಿಸಿರುವುದು ಗೊತ್ತಾಗಿದೆ. ‘ಮನೆಯಿಂದಲೇ ಕೆಲಸ ಮಾಡಿ. ಲಕ್ಷ ಲಕ್ಷ ಗಳಿಸಿ’ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡುತ್ತಿದ್ದರು. ಅದನ್ನು ನಂಬಿ ಸಾರ್ವಜನಿಕರು, ಆರೋಪಿಗಳನ್ನು ಸಂಪರ್ಕಿಸುತ್ತಿದ್ದರು.’

‘ಸಾರ್ವಜನಿಕರ ಗುರುತಿನ ಚೀಟಿಗಳನ್ನು ಪಡೆಯುತ್ತಿದ್ದ ಆರೋಪಿಗಳು, ನೋಂದಣಿ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದರು. ನಂತರ, ಯಾವುದೇ ಕೆಲಸ ನೀಡದೇ ಪರಾರಿಯಾಗುತ್ತಿದ್ದರು’ ಎಂದೂ ಮೂಲಗಳು ತಿಳಿಸಿವೆ.

‘ಆರೋಪಿಗಳು ಇದುವರೆಗೂ 4 ಸಾವಿರ ಮಂದಿಯನ್ನು ವಂಚಿಸಿರುವ ಮಾಹಿತಿ ಇದೆ. ಪ್ರಮುಖ ಆರೋಪಿಗಳಾದ ಹರ್ಮನ್ ಹಾಗೂ ಚಿತ್ರವೇಲು ತಲೆಮರೆಸಿಕೊಂಡಿದ್ದಾರೆ. ವಂಚನೆಗೆ ಒಳಗಾದವರು ಠಾಣೆಗೆ ಮಾಹಿತಿ ನೀಡಬಹುದು’ ಎಂದೂ ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು