ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎರಡು ಪ್ರತ್ಯೇಕ ಸುಲಿಗೆ ಪ್ರಕರಣ: ಏಳು ಮಂದಿ ಬಂಧನ

Published 18 ಜೂನ್ 2024, 14:33 IST
Last Updated 18 ಜೂನ್ 2024, 14:33 IST
ಅಕ್ಷರ ಗಾತ್ರ

ಬೆಂಗಳೂರು: ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಸುಲಿಗೆ ಪ್ರಕರಣಗಳಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ.

ಮನೆಗೆ ನುಗ್ಗಿ ಮಾಲೀಕರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ದರೋಡೆ ಮಾಡಿದ್ದ ಕೆ.ಜಿ.ಹಳ್ಳಿ ನಿವಾಸಿಗಳಾದ ಸೈಯದ್ ಪುರ್ಕನ್ ಅಹಮದ್(32), ಫ್ರೇಜರ್ ಟೌನ್ ನಿವಾಸಿ ಮೊಹಮ್ಮದ್ ಜುಬೈರ್(26), ಆರ್.ಟಿ.ನಗರ ನಿವಾಸಿ ಕೃತಿಕ್ ಪ್ರೀತಂ(24) ಮತ್ತು ಎಚ್‌ಬಿಆರ್ ಲೇಔಟ್ ನಿವಾಸಿ ಪ್ರಶಾಂತ್ (24) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 5 ಮೊಬೈಲ್‌, 2 ಬೈಕ್‌ ಜಪ್ತಿ ಮಾಡಿಕೊಳ್ಳಲಾಗಿದೆ.

ಜೂನ್ 5ರಂದು ಮುಂಜಾನೆ 6.30ರ ಸುಮಾರಿಗೆ ಆರೋಪಿಗಳು ತುಸಾರಕ್ ಎಂ. ಸಂಗಮಾ ಎಂಬುವವರ ಮನೆಗೆ ನುಗ್ಗಿ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದರು ಎಂದು ಪೊಲೀಸರು ಹೇಳಿದರು.

ಮೂವರ ಬಂಧನ:

ಮತ್ತೊಂದು ಪ್ರಕರಣದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಕಲಾಸಿಪಾಳ್ಯ ನಿವಾಸಿ ಮೊಹಮ್ಮದ್ ಶಾಹೀದ್(22), ಯುನುಸ್ ಪಾಷಾ (21), ಸಿದ್ದಯ್ಯ ರಸ್ತೆ ಸೈಯದ್ ಫಾರ್ಹನ್ ಪಾಷಾ(20) ಬಂಧಿತರು.

ಆರೋಪಿಗಳಿಂದ ಒಂದು ಬೈಕ್, ಒಂದು ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಜೂನ್ 11ರಂದು ಎಚ್‌ಬಿಆರ್ ಲೇಔಟ್‌ನ 18ನೇ ಕ್ರಾಸ್‌ನಲ್ಲಿ ಹೋಗುತ್ತಿದ್ದಾಗ ಪನ್ನೀರ್ ಸೆಲ್ವಂ ಎಂಬವರನ್ನು ಅಡ್ಡಗಟ್ಟಿ, ಮೊಬೈಲ್ ಕಸಿದುಕೊಂಡು ಪರಾರಿ ಆಗಿದ್ದರು. ಸೆಲ್ವಂ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT