ಬುಧವಾರ, ಜನವರಿ 19, 2022
26 °C

ಬೆಂಗಳೂರು ನಗರದಲ್ಲಿ ಕಳವು: ನೇಪಾಳದಲ್ಲಿ ಸಿಕ್ಕಿಬಿದ್ದ ಆರೋಪಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸದಾಶಿವನಗರ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳು ನೇಪಾಳದಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾರೆ.

‘ಉದ್ಯಮಿ ವಾಂಕಿ ಪೆಂಚಾಲಯ್ಯ ಎಂಬುವರ ಮನೆಯಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಲಾಲ್ ಚಂದ್ರಸಿಂಗ್ ಶಾಹಿ ಠಾಕೂರ್ ಹಾಗೂ ಕೋಮಲಾ ಎಂಬುವರೇ ಕೃತ್ಯ ಎಸಗಿದ್ದ ಅನುಮಾನವಿತ್ತು. ಇದೀಗ ಅವರಿಬ್ಬರನ್ನು ನೇಪಾಳ ಪೊಲೀಸರು  ಬಂಧಿಸಿದ್ದಾರೆ. ಇಬ್ಬರನ್ನೂ ನಗರಕ್ಕೆ ಕರೆತರಲು ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು