ಗುರುವಾರ , ಜುಲೈ 7, 2022
20 °C

ಕದ್ದ ವಾಹನ ಮಾರಾಟದ ವೇಳೆ ಸಿಕ್ಕಿಬಿದ್ದ ಕಳ್ಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕದ್ದ ದ್ವಿಚಕ್ರ ವಾಹನವನ್ನು ಕಡಿಮೆ ದರಕ್ಕೆ ಮಾರಲು ಯತ್ನಿಸಿದ್ದ ಆರೋಪಿಯನ್ನು ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 

‘ಇಮ್ತಿಯಾಜ್‌ (40) ಬಂಧಿತ. ಹೆಬ್ಬಾಳ ನಿವಾಸಿಯಾಗಿರುವ ಈತನಿಂದ ₹1.5 ಲಕ್ಷ ಮೌಲ್ಯದ ನಾಲ್ಕು ಸ್ಕೂಟರ್‌ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ಕೂಟರ್‌ ಮಾರಾಟ ಮಾಡಲು ಮುಂದಾಗಿರುವ ಕುರಿತು ಇದೇ 20ರ ಸಂಜೆ ಮಾಹಿತಿ ಲಭಿಸಿತ್ತು. ಆರೋಪಿಯನ್ನು ಬಂಧಿಸಲು ಹೋದಾಗ ಪರಾರಿಯಾಗಲು ಪ್ರಯತ್ನಿಸಿದ್ದ. ಹಿಡಿದು ವಿಚಾರಿಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಈತನ ಬಂಧನದಿಂದ ಹೆಬ್ಬಾಳ, ಕೆ.ಆರ್‌.ಪುರ ಹಾಗೂ ನಂದಿನಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು