ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ನಿಂದ ಬೆಂಗಳೂರಿನಲ್ಲಿ ಉಬರ್ ಇ.ವಿ. ಕ್ಯಾಬ್ ಸೇವೆ

ಈ ಸೇವೆಯು ಬೆಂಗಳೂರು ಮಾತ್ರವಲ್ಲದೆ ಮುಂಬೈ ಹಾಗೂ ದೆಹಲಿಯಲ್ಲಿಯೂ ಆರಂಭವಾಗಲಿದೆ.
Published 24 ಮೇ 2023, 14:45 IST
Last Updated 24 ಮೇ 2023, 14:45 IST
ಅಕ್ಷರ ಗಾತ್ರ

ನವದೆಹಲಿ: ಉಬರ್ ಕಂಪನಿಯು ಜೂನ್‌ ತಿಂಗಳಿನಿಂದ ಬೆಂಗಳೂರಿನಲ್ಲಿ ಇ.ವಿ. ಕ್ಯಾಬ್ ಸೇವೆಗಳನ್ನು ಆರಂಭಿಸಲಿದೆ. ಇದು ಆರಂಭವಾದ ನಂತರದಲ್ಲಿ ಉಬರ್ ಗ್ರಾಹಕರು, ಕ್ಯಾಬ್ ಸೇವೆ ಪಡೆಯುವ ಸಂದರ್ಭದಲ್ಲಿ ಇ.ವಿ. ಕ್ಯಾಬ್‌ ಬೇಕು ಎಂಬ ಬೇಡಿಕೆ ಸಲ್ಲಿಸಲು ಅವಕಾಶ ಲಭ್ಯವಾಗಲಿದೆ.

ಈ ಸೇವೆಯು ಬೆಂಗಳೂರು ಮಾತ್ರವಲ್ಲದೆ ಮುಂಬೈ ಹಾಗೂ ದೆಹಲಿಯಲ್ಲಿಯೂ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಇದನ್ನು ಹಂತ ಹಂತವಾಗಿ ಇತರ ನಗರಗಳಿಗೂ ವಿಸ್ತರಿಸಲಾಗುತ್ತದೆ ಎಂದು ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾ ಅಧ್ಯಕ್ಷ ಪ್ರಭಜೀತ್ ಸಿಂಗ್ ಹೇಳಿದ್ದಾರೆ.

ಇ.ವಿ.ಗಳಿಗೆ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲು ಜಿಯೊ–ಬಿಪಿ ಹಾಗೂ ಜಿಎಂಆರ್ ಗ್ರೀನ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಉಬರ್‌ ಪಾಲಿಗೆ ಪ್ರಮುಖವಾಗಿರುವ ಏಳು ನಗರಗಳಲ್ಲಿ ಒಟ್ಟು 25 ಸಾವಿರ ಇ.ವಿ.ಗಳನ್ನು ಸೇವೆಗೆ ಮುಕ್ತವಾಗಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT