ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ರಸ್ತೆ ಬದಿ ಶೆಡ್ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದು, ಮಚ್ಚಿನಿಂದ ಕಾಲಿಗೆ ಶನಿವಾರ ತಡರಾತ್ರಿ ಹೊಡೆಯಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಸುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಹಾಗೂ ಬಿಜೆಪಿ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ದುಷ್ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ಹಾಗೂ ಕಾಟನ್ಪೇಟೆ ಠಾಣೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಘಟನೆ ಸಂಬಂಧ ಹಸು ಮಾಲೀಕ ಕರ್ಣ ಅವರು ನೀಡಿದ ದೂರಿನ ಮೇರೆಗೆ ಬಿಎನ್ಎಸ್ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಅಡಿ ಕಾಟನ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

‘ಈ ಪ್ರದೇಶದಲ್ಲಿ ಹಲವರು ರಸ್ತೆಯಲ್ಲಿ ಹಸುಗಳನ್ನು ಕಟ್ಟುತ್ತಾರೆ. ಗಾಯಗೊಂಡ ಹಸುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ ಹಾಗೂ ಸ್ಥಳೀಯರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ತಿಳಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಪಿ.ಸಿ.ಮೋಹನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಹಸುವಿನ ಮಾಲೀಕ ಕರ್ಣ ಅವರಿಗೆ ಸಾಂತ್ವನ ಹೇಳಿದರು.

ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ

‘ಹಲವು ದಶಕಗಳಿಂದ ಈ ಪ್ರದೇಶದಲ್ಲಿ ಪಶು ಆಸ್ಪತ್ರೆ ಇದೆ. ಆಸ್ಪತ್ರೆಗೆ ಸೇರಿದ ಜಮೀನನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಸ್ಪತ್ರೆ ಮುಚ್ಚುವುದರ ವಿರುದ್ಧ ಹಸುಗಳ ಮಾಲೀಕ ಕರ್ಣ ಹಾಗೂ ಇತರರು ವಿರೋಧ ವ್ಯಕ್ತಪಡಿಸಿದ್ದರು. ಹಾಗಾಗಿ ಈ ಕೃತ್ಯವೆಸಗಲಾಗಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

‘ನನ್ನ ಎಂಟು ಹಸುಗಳ ಪೈಕಿ ಮೂರು ಹಸುಗಳ ಕೆಚ್ಚಲು ಕೊಯ್ದು, ಮಚ್ಚಿನಿಂದ ಕಾಲುಗಳಿಗೆ ಹೊಡೆದು ಗಾಯಗೊಳಿಸಲಾಗಿದೆ. ಮೂಕ ಪ್ರಾಣಿಗಳು ರಾತ್ರಿಯಿಂದ ನರಳಾಡಿವೆ. ನನ್ನನ್ನು ಸಾಯಿಸುವ ಬದಲು ಮೂಕ ಪ್ರಾಣಿಗಳ ಮೇಲೆ ದಾಳಿ ನಡೆಸಿದ್ದಾರೆ. ನನಗೆ ಹೇಳಿದ್ದರೆ ಈ ಜಾಗವನ್ನೇ ಬಿಟ್ಟು ಹೋಗುತ್ತಿದ್ದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಅವರನ್ನು ಹಿಡಿದು ನಮಗೆ ಒಪ್ಪಿಸಿ, ಬುದ್ಧಿ ಕಲಿಸುತ್ತೇವೆ’ ಎಂದು ಕರ್ಣ ಹೇಳಿದರು.

ಕಣ್ಣೀರಿಟ್ಟ ಸ್ಥಳೀಯರು:

‘ಈ ಪ್ರದೇಶದಲ್ಲಿ ಮಾದಕ ವ್ಯಸನಿಗಳು, ಪುಂಡರ ಹಾವಳಿ ಮಿತಿ ಮೀರುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ವಿಫಲರಾಗಿದ್ದಾರೆ. ಮೂಕ ಪ್ರಾಣಿಗಳ ಮೇಲೆ ವಿಕೃತಿ ಮೆರೆದಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಮೂಕಪ್ರಾಣಿಗಳ ನೋವು ಕಂಡು ಕಣ್ಣೀರಿಟ್ಟರು.

‘ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ. ಘಟನಾ ಸ್ಥಳದಲ್ಲಿ ಎಲ್ಲಿಯೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಸರ್ಕಾರ, ಪೊಲೀಸ್ ಇಲಾಖೆ ಸತ್ತುಹೋಗಿದೆ. ಈ ಪ್ರದೇಶದಲ್ಲಿ ಮಾದಕ ವ್ಯಸನಿಗಳ ಕಾಟ ಮಿತಿಮೀರಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದು ಪಿ.ಸಿ.ಮೋಹನ್ ಆಗ್ರಹಿಸಿದರು.

‘ಒಂದು ಹಸು 20 ಲೀಟರ್ ಹಾಲು ನೀಡುತ್ತಿತ್ತು. ಈಗ ಯಾವುದೇ ಹಸು ಬದುಕುವ ಸ್ಥಿತಿಯಲ್ಲೇ ಇಲ್ಲ. ಹಸು ಮಾಲೀಕರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ನೀಡುತ್ತಿದ್ದೇನೆ. ಸರ್ಕಾರ ಕೂಡ ನೆರವು ನೀಡಬೇಕು’ ಎಂದು ಆರ್.ಅಶೋಕ ಹೇಳಿದರು.

‘ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಹಸು ಕೊಡಿಸಿದ ಸಚಿವ ಜಮೀರ್

ಸ್ಥಳೀಯ ಶಾಸಕರೂ ಆಗಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಟನ್ ಪೇಟೆ ಪಶು ಆಸ್ಪತ್ರೆಗೆ ಭೇಟಿ ನೀಡಿ ಹಸುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

‘ನೀಡಿದ್ದ ಭರವಸೆಯಂತೆ ಕರ್ಣ ಅವರಿಗೆ ಭಾನುವಾರವೇ ಮೂರು ಹಸುಗಳನ್ನು ಕೊಡಿಸಿದ್ದಾರೆ’ ಎಂದು ಸಚಿವರ ಕಚೇರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.