ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಮತ್ತು ಉದ್ಯೋಗ ಇಲಾಖೆ ವತಿಯಿಂದ ಎಚ್ಎಸ್ಆರ್ ಬಡಾವಣೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ 225ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗಾವಕಾಶ ಪಡೆದರು.

ನಗರದ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ನಡೆದ ಈ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯವರು ಸಾಂಕೇತಿಕವಾಗಿ ನೇಮಕಾತಿ ಪತ್ರ ವಿತರಿಸಿದರು.

650ಕ್ಕೂ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. 42ಕ್ಕೂ ಹೆಚ್ಚು ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರನ್ನು ನೇಮಕ ಮಾಡಿಕೊಂಡರು.

ಉದ್ಯೋಗ ವಿನಿಮಯ ಕೇಂದ್ರದ ಜಂಟಿ ನಿರ್ದೇಶಕ ಕೆ. ಶ್ರೀನಿವಾಸ್, ಕಾಲೇಜಿನ ಪ್ರಾಚಾರ್ಯ ಡಾ.ಎಂ. ವೆಂಕಟರಮಣರೆಡ್ಡಿ, ಉದ್ಯೋಗ ಮಾಹಿತಿ ಕೋಶದ ಅಧಿಕಾರಿ ಡಾ.ಆರ್. ನರ್ಮದಾ ಹಾಗೂ ಕಾಲೇಜಿನ ಉಪನ್ಯಾಸಕರು ಮಾರ್ಗದರ್ಶನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.