ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ಯುಜಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ನ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಸೀಟು ಹಂಚಿಕೆಯಾದವರು ಡಿ.10ರೊಳಗೆ ಶುಲ್ಕ ಪಾವತಿಸಬೇಕು. (ಈಗಾಗಲೇ ಪಾವತಿಸಿರುವ ಶುಲ್ಕವನ್ನು ಕಡಿತಗೊಳಿಸುವ ಮೂಲಕ) ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು, ಡಿ.11ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 1,080 ಮಂದಿಗೆ ವೈದ್ಯಕೀಯ ಹಾಗೂ 266 ಮಂದಿಗೆ ದಂತ ವೈದ್ಯಕೀಯ ಸೀಟುಗಳನ್ನು ಈ ಸುತ್ತಿನಲ್ಲಿ ಹಂಚಿಕೆ ಮಾಡಲಾಗಿದೆ. ಆಡಳಿತ ಮಂಡಳಿ ಕೋಟಾದ ಇನ್ನೂ 74 ವೈದ್ಯಕೀಯ ಸೀಟು ಈ ಸುತ್ತಿನಲ್ಲಿ ಉಳಿದಿವೆ. ದಂತ ವೈದ್ಯಕೀಯ ಸೀಟು ಎಲ್ಲವೂ ಹಂಚಿಕೆಯಾಗಿದ್ದು ಒಂದೂ ಖಾಲಿ ಇಲ್ಲ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.