ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಗಾದಿ: 2000ಕ್ಕೂ ಅಧಿಕ ವಿಶೇಷ ಬಸ್

Published 4 ಏಪ್ರಿಲ್ 2024, 23:30 IST
Last Updated 4 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಯುಗಾದಿ ಸಂದರ್ಭದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ನಾಲ್ಕು ಸಾರಿಗೆ ನಿಗಮಗಳು 2000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಏ.6ರಿಂದ 8ರ ವರೆಗೆ ಬೆಂಗಳೂರಿನಿಂದ ಬಸ್‌ಗಳು ವಿವಿಧೆಡೆ ಸಂಚರಿಸಲಿವೆ. ಏ.9 ಮತ್ತು 10ಕ್ಕೆ ವಾಪಸ್ಸಾಗಲಿವೆ.

ವಾರಂತ್ಯದ ರಜೆಗಳೊಂದಿಗೆ ಸೋಮವಾರ ಒಂದು ರಜೆ ಹಾಕಿದರೆ ನಾಲ್ಕು ರಜೆಗಳು ಸಿಗುವುದರಿಂದ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಳವಾಗುವುದರಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಕೆಎಸ್‌ಆರ್‌ಟಿಸಿಯ 1,750, ಎನ್‌ಡಬ್ಲ್ಯುಕೆಆರ್‌ಟಿಸಿಯ 145, ಕೆಕೆಆರ್‌ಟಿಸಿಯ 200 ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳು ಸಂಚರಿಸಲಿವೆ.

ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಇ.ವಿ. ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ಸಂಚಾರ ಇರಲಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಹೊರಡಲಿವೆ. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್‌ಘಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT