ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗಾಂಡದ ಮಗು ದತ್ತು ಸ್ವೀಕಾರ: ಪರಿಗಣಿಸಲು ಹೈಕೋರ್ಟ್ ನಿರ್ದೇಶನ

Published 29 ಮಾರ್ಚ್ 2024, 15:23 IST
Last Updated 29 ಮಾರ್ಚ್ 2024, 15:23 IST
ಅಕ್ಷರ ಗಾತ್ರ

ಬೆಂಗಳೂರು: ಉಗಾಂಡದ ಮಗುವನ್ನು ದತ್ತು ಪಡೆಯುವುದಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್; "ಹೇಗ್ ದತ್ತು ಒಪ್ಪಂದಕ್ಕೆ ಉಗಾಂಡ ಸಹಿ ಹಾಕದೇ ಇರುವುದು ಭಾರತೀಯ ದಂಪತಿಯ ಮಗುವಿನ ಹಕ್ಕು ಕಸಿಯಲು ಕಾರಣವಾಗದು" ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಸಂಬಂಧ ದಂಪತಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, "ಉಗಾಂಡದ ಮಗುವನ್ನು ದತ್ತು ಪಡೆಯುವುದಕ್ಕೆ ದಂಪತಿ ಸಲ್ಲಿಸಿರುವ ಮನವಿ ಪರಿಗಣಿಸಿ" ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

“ಹಿಂದೂ ದತ್ತು ಮತ್ತು ನಿರ್ವಹಣಾ ಕಾಯ್ದೆ ಅಡಿ ದತ್ತು ಪ್ರಕ್ರಿಯೆ ನಡೆಯದೇ ಇದ್ದರೂ ದಂಪತಿಯ ಮಗುವಿನ ಹಕ್ಕು ಮಸುಕಾಗದಂತೆ ನೋಡಿಕೊಳ್ಳಬೇಕು” ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸಮೀರ್ ಶರ್ಮಾ ಹಾಗೂ ಕೇಂದ್ರ ಸರ್ಕಾರದ ಪರ ಡೆಪ್ಯುಟಿ ಸಾಲಿಸಿಟರ್ ಎಚ್.ಶಾಂತಿಭೂಷಣ್ ವಾದ ಮಂಡಿಸಿದ್ದರು.

ಪ್ರಕರಣವೇನು?: ಉಗಾಂಡದಲ್ಲಿದ್ದ ಭಾರತೀಯ ದಂಪತಿ ಉಗಾಂಡದ ಮಗುವೊಂದನ್ನು ದತ್ತು ಪಡೆದಿದ್ದರು. ಈ ಸಂಬಂಧ ಉಗಾಂಡ ನ್ಯಾಯಾಲಯ ದಂಪತಿಗೆ ಮಗುವಿನ ದತ್ತು ಸ್ವೀಕಾರದ ಹಕ್ಕನ್ನು ಖಾತರಿಪಡಿಸಿತ್ತು. ಇದನ್ನು ಔಪಚಾರಿಕಗೊಳಿಸುವ ನಿಟ್ಟಿನಲ್ಲಿ ದಂಪತಿ ಭಾರತದ, ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರಕ್ಕೆ (ಸಿಎಆರ್‌ಎ) ಮನವಿ ಸಲ್ಲಿಸಿದ್ದರು. ಆದರೆ, ಈ ಮನವಿಗೆ ಸಿಎಆರ್‌ಎ ಸ್ಪಂದಿಸಿರಲಿಲ್ಲ. ಇದಕ್ಕಾಗಿ ದಂಪತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT