ಆನೇಕಲ್: ತಾಲ್ಲೂಕಿನ ಚಂದಾಪುರ ಸಮೀಪದ ದೀಪಹಳ್ಳಿಯ ಸಂತಜೋಸೆಫ್ ಚಾಮಿನೆಟ್ ಅಕಾಡೆಮಿಯಲ್ಲಿ ಕಲಿಯುತ್ತಿರುವ ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಲಾಗಿದೆ. 6 ವರ್ಷದ ಮಗಳನ್ನು ಅನುತ್ತೀರ್ಣಗೊಳಿಸಿರುವ ಬಗ್ಗೆ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.
ಮಾಜಿ ಶಿಕ್ಷಣ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಸೇರಿದಂತೆ ಸಾರ್ವಜನಿಕರು ಶಾಲೆಯ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗುರುವಾರ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.
‘ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಅಳೆಯಲು ‘ಟೀಚ್‌ಮೆಂಟ್’ ಎಂಬ ಮೊಬೈಲ್ ಆ್ಯಪ್ ಬಳಕೆ ಮಾಡಲಾಗುತ್ತಿದೆ. ಒಂದು ವೇಳೆ ವಿದ್ಯಾರ್ಥಿಗಳು ಶೇ 35ಕ್ಕಿಂತ ಕಡಿಮೆ ಅಂಕ ಪಡೆದಲ್ಲಿ ಫಲಿತಾಂಶವನ್ನು ಫೇಲ್ ಎಂದು ತೋರಿಸುವ ಡಿಫಾಲ್ಟ್ ಫೀಚರ್ ಆ್ಯಪ್‌ನಲ್ಲಿದೆ. ಇದು ಸಮಸ್ಯೆಗೆ ಕಾರಣವಾಗಿದ್ದು, ಸರಿಪಡಿಸುತ್ತೇವೆ’ ಎಂದು ಶಾಲೆಯ ಪ್ರಾಂಶುಪಾಲ ಸಾಜು ಚಿಟ್ಟದಿಯಿಲ್ ಪ್ರತಿಕ್ರಿಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.