ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆಯಿಲ್ಲದ ₹ 28 ಲಕ್ಷ ನಗದು ಜಪ್ತಿ

Last Updated 16 ಮಾರ್ಚ್ 2023, 4:47 IST
ಅಕ್ಷರ ಗಾತ್ರ

ಬೆಂಗಳೂರು: ದಾಖಲೆಯಿಲ್ಲದೇ ಸಾಗಣೆ ಮಾಡುತ್ತಿದ್ದ ₹ 28 ಲಕ್ಷ ಮೊತ್ತವನ್ನು ಸಿಟಿ ಮಾರುಕಟ್ಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಬುಧವಾರ ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ಧರ್ಮಾವರಂನ ಕಶ್ಯ ಸತೀಶ್‌ ಕದಮ್‌ (26) ಎಂಬುವವರು ಈ ಹಣ ಸಾಗಣೆ ಮಾಡುತ್ತಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹಣದ ಜತೆಗೆ ಅವರು 319 ಗ್ರಾಂ ಚಿನ್ನ, 15 ಕೆ.ಜಿ ಬೆಳ್ಳಿ ಸಾಮಗ್ರಿ ಸಾಗಣೆ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

‘ವ್ಯಕ್ತಿಯ ಮೇಲೆ ಅನುಮಾನ ಬಂದ ಕಾರಣಕ್ಕೆ ಬ್ಯಾಗ್‌ ಪರಿಶೀಲನೆ ನಡೆಸಿದಾಗ ಹಣ, ಚಿನ್ನ ಸಾಗಣೆ ಮಾಡುತ್ತಿರುವುದು ಪತ್ತೆಯಾಯಿತು. ಸದ್ಯಕ್ಕೆ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಳ್ಳಲಾಗಿದೆ. ದಾಖಲೆ ಸಲ್ಲಿಸುವಂತೆ ತಿಳಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT